ಬೆಂಗಳೂರು: ಬುಲ್ಡೋಜರ್ ಬಳಸಿ ಮನೆಗಳನ್ನು ನೆಲಸಮ ಮಾಡುವ ಘಟನೆಗಳ ಬಗೆಗೆ ಸ್ವಯಂಪ್ರೇರಿತವಾಗಿ ಕ್ರಮ ತೆಗೆದುಕೊಳ್ಳಬೇಕು ಎಂದು ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ.

'ಗೌರವಾನ್ವಿತ ಸುಪ್ರೀಂ ಕೋರ್ಟ್ ಬುಲ್ಡೋಜರ್ ಆಡಳಿತದ ಕಾರ್ಯಾಚರಣೆ ವಿರುದ್ಧ ದಯವಿಟ್ಟು ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಬಹುದೇ? ಈಗ ಅಲ್ಲದಿದ್ದರೆ ಮತ್ತಿನ್ಯಾವಾಗ?' ಎಂದು ಮಹುವಾ ಅವರು ಟ್ವೀಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಪ್ರವಾದಿ ಮಹಮ್ಮದರ ವಿರುದ್ಧ ಅವಹೇಳನ ಮಾಡಿದ ಮಾಜಿ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಮತ್ತು ನವೀನ್ ಜಿಂದಾಲ್ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡವರ ಮನೆಗಳನ್ನು ಬುಲ್ಡೋಜರ್ ಬಳಸಿ ನೆಲಸಮ ಮಾಡಲಾಗುತ್ತಿರುವ ಕ್ರಮಕ್ಕೆ ದೇಶದಾದ್ಯಂತ ತೀವ್ರ ಪ್ರತಿರೋಧ ವ್ಯಕ್ತವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.