ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಣಿಪುರ ಸಿ.ಎಂ ನಿವಾಸದ ಬಳಿ ಬೆಂಕಿ ಅನಾಹುತ

Published 15 ಜೂನ್ 2024, 19:51 IST
Last Updated 15 ಜೂನ್ 2024, 19:51 IST
ಅಕ್ಷರ ಗಾತ್ರ

ಇಂಫಾಲ್: ಮಣಿಪುರದ ಮುಖ್ಯಮಂತ್ರಿ ಎನ್‌.ಬೀರೇನ್‌ ಸಿಂಗ್‌ ಅವರ ಅಧಿಕೃತ ನಿವಾಸದ ಸಮೀಪದ ಕಟ್ಟಡವೊಂದರಲ್ಲಿ ಶನಿವಾರ ಸಂಜೆ ಭಾರಿ ಬೆಂಕಿ ಅನಾಹುತ ಸಂಭವಿಸಿದೆ.

ಅದೃಷ್ಟವಶಾತ್‌ ಪ್ರಾಣಹಾನಿ ಸಂಭವಿಸಿಲ್ಲ. ಮುಖ್ಯಮಂತ್ರಿ ಅವರ ನಿವಾಸಕ್ಕೆ ಯಾವುದೇ ಹಾನಿ ಉಂಟಾಗಿಲ್ಲ. ಅಗ್ನಿಶಾಮದ ದಳದ ಮೂರು ವಾಹನಗಳನ್ನು ಬಳಸಿ ಸುಮಾರು ಒಂದು ಗಂಟೆಯ ಪ್ರಯತ್ನದ ಬಳಿಕ ಬೆಂಕಿಯ‌ನ್ನು ನಂದಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಬೆಂಕಿ ಬಿದ್ದ ಕಟ್ಟಡವು ಐಎಎಸ್‌ ಅಧಿಕಾರಿ ದಿವಂಗತ ಟಿ.ಕಿಪ್ಗೆನ್‌ ಅವರ ಕುಟುಂಬಕ್ಕೆ ಸೇರಿದ್ದಾಗಿದೆ. ಕಳೆದ ವರ್ಷ ಮಣಿಪುರದಲ್ಲಿ ಹಿಂಸಾಚಾರ ಆರಂಭವಾದ ಬಳಿಕ ಈ ಕಟ್ಟಡದಲ್ಲಿ ಯಾರೂ ವಾಸವಿರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT