ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಣಿಪುರ | ಸಿಎಂ ಬಂಗಲೆ ಸಮೀಪ ಅಗ್ನಿ ಅವಘಡ

Published 15 ಜೂನ್ 2024, 15:40 IST
Last Updated 15 ಜೂನ್ 2024, 15:40 IST
ಅಕ್ಷರ ಗಾತ್ರ

ಇಂಫಾಲ: ಮಣಿಪುರ ಮುಖ್ಯಮಂತ್ರಿ ಬಂಗಲೆಯ ಸಮೀಪ ಅಗ್ನಿ ಅವಘಡ ಸಂಭವಿಸಿರುವ ಬಗ್ಗೆ ಶನಿವಾರ ವರದಿಯಾಗಿದೆ.

ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಅವರ ಅಧಿಕೃತ ಬಂಗಲೆ ಸಮೀಪ ಇರುವ ಮಣಿಪುರ ಸೆಕ್ರೆಟರಿಯೇಟ್ ಸಚಿವಾಲಯ ಸಂಕೀರ್ಣದಲ್ಲಿರುವ ಕಟ್ಟಡದಲ್ಲಿ ಶನಿವಾರ ಸಂಜೆ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೂರು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ.

ಅಗ್ನಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT