ಜೂನ್ 4, 2025: ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟು, ಅನೇಕರು ಗಾಯಗೊಂಡಿದ್ದರು.

ಮೇ 3, 2025: ಉತ್ತರ ಗೋವಾದ ಶಿರ್ಗೊ ಗ್ರಾಮದ ದೇವಸ್ಥಾನದ ಉತ್ಸವ ಸಮಾರಂಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 6 ಜನರು ಮೃತಪಟ್ಟು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು

ಫೆಬ್ರುವರಿ 15, 2025: ಪ್ರಯಾಗರಾಜ್ ಕುಂಭಮೇಳಕ್ಕೆ ಹೋಗಲು ದೆಹಲಿ ರೈಲು ನಿಲ್ದಾಣದಲ್ಲಿ ಪ್ರಯಾಣಿಕರು ಅಪಾರ ಸಂಖ್ಯೆಯಲ್ಲಿ ಸೇರಿದ್ದ ವೇಳೆ ಉಂಟಾದ ಕಾಲ್ತುಳಿತದಲ್ಲಿ ಮಹಿಳೆ, ಮಗು ಸೇರಿ 18 ಮಂದಿ ಮೃತಪಟ್ಟಿದ್ದರು

ಜನವರಿ 29, 2025: ಮಹಾ ಕುಂಭಮೇಳದಲ್ಲಿ ‘ಅಮೃತ ಸ್ನಾನ’ಕ್ಕಾಗಿ ಅಪಾರ ಸಂಖ್ಯೆಯ ಭಕ್ತರು ಸೇರಿದ್ದ ವೇಳೆ ಉಂಟಾದ ಕಾಲ್ತುಳಿತದಲ್ಲಿ 30 ಜನರು ಮೃತಪಟ್ಟು, 60ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು

ಜನವರಿ 8, 2025: ತಿರುಮಲ ಬೆಟ್ಟದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ದ್ವಾರ ದರ್ಶನದ ಟಿಕೆಟ್ಗಾಗಿ ಉಂಟಾದ ನೂಕುನುಗ್ಗಲು, ಕಾಲ್ತುಳಿತದಲ್ಲಿ 6 ಮಂಂದಿ ಮೃತಪಟ್ಟು, 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು

ಡಿಸೆಂಬರ್ 4, 2024: ಅಲ್ಲು ಅರ್ಜುನ್ ನಟನೆಯ ‘ಪುಷ್ಪಾ–2’ ಚಿತ್ರದ ವೀಕ್ಷಣೆಗಾಗಿ ಹೈದರಾಬಾದ್ನ ಸಂಧ್ಯಾ ಥಿಯೇಟರ್ ಬಳಿ ಉಂಟಾದ ಕಾಲ್ತುಳಿತದಲ್ಲಿ 35 ವರ್ಷದ ಮಹಿಳೆ ಮೃತಪಟ್ಟು, ಬಾಲಕನೊಬ್ಬ ಗಾಯಗೊಂಡಿದ್ದ

ಜುಲೈ 2, 2024: ಉತ್ತರ ಪ್ರದೇಶದ ಹಾಥರಸ್ನಲ್ಲಿ ಸ್ವಯಂ ಘೋಷಿತ ದೇವಮಾನವ ಭೋಲೆ ಬಾಬಾ ಆಯೋಜಿಸಿದ್ದ ಸತ್ಸಂಗದಲ್ಲಿ ಭಕ್ತರ ದಟ್ಟಣೆಯಿಂದ ಉಂಟಾದ ಕಾಲ್ತುಳಿತದಲ್ಲಿ 100ರಿಂದ 120 ಮಂದಿ ಮೃತಪಟ್ಟಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.