ಜಮ್ಮು: ಪೂಂಚ್ ಜಿಲ್ಲೆಯ ಮೆಂಧಾರ್ ವಲಯದಲ್ಲಿ ಮೋಟರ್ ಸೈಕಲ್‌ವೊಂದರಲ್ಲಿ ಅಳವಡಿಸಿದ್ದ ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಸೂಕ್ತ ಸಮಯಕ್ಕೆ ನಿಷ್ಕ್ರೀಯಗೊಳಿಸಲಾಗಿದ್ದು, ದೊಡ್ಡ ಅನಾಹುತ ತಪ್ಪಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ರಾತ್ರಿ 10 ಗಂಟೆಗೆ ಈ ಬಾಂಬ್ ಇರಿಸಲಾಗಿದ್ದು, ಬಾಂಬ್ ನಿಷ್ಕ್ರಿಯ ದಳದವರು ಅದನ್ನು ಭಾನುವಾರ ಮಧ್ಯಾಹ್ನ 1 ಗಂಟೆಗೆ ನಾಶಪಡಿಸಿದ್ದಾರೆ. ಯಾವುದೇ ಹಾನಿ ಸಂಭವಿಸಿಲ್ಲ. ಉಗ್ರರು ಬಾಂಬ್ ಅಳವಡಿಸಿದ್ದ ವಾಹನವನ್ನು ಈ ಸ್ಥಳದಲ್ಲಿ ಇರಿಸಿ, ಸಮೀಪವೇ ಇರುವ ಅರಣ್ಯ ಪ್ರದೇಶಕ್ಕೆ ತೆರಳಿರುವ ಶಂಕೆ ಇದೆ ಎಂದು ಜಿಲ್ಲೆಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರಮೇಶ್ ಆಂಗ್ರಾಲ್ ಹೇಳಿದರು.

ಉಗ್ರರ ಪತ್ತೆಗಾಗಿ ಪೊಲೀಸ್ ಮತ್ತು ರಾಷ್ಟ್ರೀಯ ರೈಫಲ್ಸ್ ಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.