ಶನಿವಾರ, 7 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹರ್ ಘರ್ ತಿರಂಗಾವನ್ನು ಸ್ಮರಣೀಯ ಅಭಿಯಾನವನ್ನಾಗಿಸಿ: ಪ್ರಧಾನಿ ಕರೆ

Published 9 ಆಗಸ್ಟ್ 2024, 4:39 IST
Last Updated 9 ಆಗಸ್ಟ್ 2024, 4:39 IST
ಅಕ್ಷರ ಗಾತ್ರ

ಬೆಂಗಳೂರು: ಹರ್ ಘರ್ ತಿರಂಗಾ (ಮನೆ ಮನೆಯಲ್ಲೂ ತ್ರಿವರ್ಣ ಧ್ವಜ) ಅಭಿಯಾನವನ್ನು ದೇಶದ ಜನರು ಸ್ಮರಣೀಯ ಅಂದೋಲನವನ್ನಾಗಿ ರೂಪಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ್ದಾರೆ.

ಆಗಸ್ಟ್ 15 ರ 78 ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಅವರು ಈ ಕರೆ ನೀಡಿದ್ದಾರೆ. ಅಲ್ಲದೇ ಸಾಮಾಜಿಕ ಜಾಲತಾಣಗಳ ಡಿಪಿ ಇಮೇಜ್‌ಗಳನ್ನು ತಿರಂಗಾ ಧ್ವಜವಾಗಿ ಇಡಬೇಕು ಎಂದು ಅವರು ಹೇಳಿದ್ದಾರೆ.

ಈ ಕುರಿತು ಅವರು ಎಕ್ಸ್ ತಾಣದಲ್ಲಿ ಪೋಸ್ಟ್ ಮಾಡಿ ತಮ್ಮ ಪ್ರೊಫೈಲ್ ಪಿಕ್ಚರ್ ಅನ್ನು ತಿರಂಗಾವಾಗಿ ಬದಲಾಯಿಸಿದ್ದಾರೆ.

ಅಲ್ಲದೇ ಹರ್ ಘರ್ ತಿರಂಗಾ ಅಭಿಯಾನದ ಭಾಗವಾಗಿ ದೇಶವಾಸಿಗಳು ಸೆಲ್ಫಿ ತೆಗೆದುಕೊಳ್ಳುವ ಮೂಲಕ ವ್ಯಾಪಕವಾಗಿ ನಡೆಸಬೇಕು ಎಂದು ಕರೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT