ಶುಕ್ರವಾರ, 22 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲಯಾಳ ನಟಿ ಅಪರ್ಣಾ ಆತ್ಮಹತ್ಯೆ?

Published 1 ಸೆಪ್ಟೆಂಬರ್ 2023, 20:23 IST
Last Updated 1 ಸೆಪ್ಟೆಂಬರ್ 2023, 20:23 IST
ಅಕ್ಷರ ಗಾತ್ರ

ತಿರುವನಂತಪುರ: ‘ಮಲಯಾಳ ಸಿನಿಮಾ, ಧಾರಾವಾಹಿ ನಟಿ ಅಪರ್ಣಾ ನಾಯರ್‌ (33) ಅವರ ಮೃತದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಅವರ ನಿವಾಸದಲ್ಲಿ ಪತ್ತೆಯಾಗಿದೆ’ ಎಂದು ಪೊಲೀಸರು ಶುಕ್ರವಾರ ಹೇಳಿದ್ದಾರೆ.

‘ಗುರುವಾರ ಸಂಜೆ 7.30ರ ಸುಮಾರಿಗೆ ಘಟನೆ ನಡೆದಿದೆ. ಅಪರ್ಣಾ ಪತಿ, ಮಕ್ಕಳೊಂದಿಗೆ ವಾಸಿಸುತ್ತಿದ್ದರು. ಕರಮಾನ ಬಳಿಯಲ್ಲಿರುವ ಅವರ ನಿವಾಸದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಪರ್ಣಾ ಪತ್ತೆಯಾದ ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆ ಅಧಿಕಾರಿಗಳು ಈ ಕುರಿತು ನಮಗೆ ಮಾಹಿತಿ ನೀಡಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪ್ರಾರಂಭಿಸಲಾಗಿದೆ’ ಎಂದರು. ಪ್ರಸ್ತುತ, ಅಪರ್ಣಾ ಅವರದ್ದು ಅಸಹಜ ಸಾವು ಪ್ರಕರಣವಾಗಿದ್ದು, ಕೌಟುಂಬಿಕ ಕಲಹವೇ ಕಾರಣವಿರಬಹುದೆಂದು ಎಂದು ಪೊಲೀಸರು ಶಂಕಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT