ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಲೆಗಾಂವ್‌ ಸ್ಫೋಟಅರ್ಜಿ ತ್ವರಿತ ವಿಚಾರಣೆಗೆ‘ಸುಪ್ರೀಂ’ ಸಲಹೆ

Last Updated 1 ಆಗಸ್ಟ್ 2022, 11:21 IST
ಅಕ್ಷರ ಗಾತ್ರ

ನವದೆಹಲಿ: ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ ಲೆಪ್ಟಿನೆಂಟ್‌ ಕರ್ನಲ್‌ ಪ್ರಸಾದ್ ಪುರೋಹಿತ್‌ ಅವರ ಅರ್ಜಿಯನ್ನು ತ್ವರಿತವಾಗಿ ವಿಚಾರಣೆಗೆ ಪರಿಗಣಿಸಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ ಬಾಂಬೆ ಹೈಕೋರ್ಟ್‌ಗೆ ತಿಳಿಸಿದೆ.

ಪ್ರಕರಣದಲ್ಲಿ ತಮ್ಮನ್ನು ಶಿಕ್ಷೆಗೆ ಒಳಪಡಿಸಲು ಅನುಮತಿ ನೀಡಿರುವ ರಾಜ್ಯ ಸರ್ಕಾರದ ಕ್ರಮವು ಕಾನೂನುಬಾಹಿರವಾದುದು ಎಂದು ಪ್ರತಿಪಾದಿಸಿ ಪುರೋಹಿತ್‌ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಈ ಪ್ರಕರಣದ ಸಂಬಂಧ ಇದುವರೆಗೂ ಸುಮಾರು 246 ಸಾಕ್ಷ್ಯಗಳನ್ನು ಪರಿಶೀಲಿಸಲಾಗಿದೆ ಎಂಬ ಅಂಶವನ್ನು ನ್ಯಾಯಮೂರ್ತಿಗಳಾದ ಹೇಮಂತ್‌ ಗುಪ್ತಾ ಮತ್ತು ವಿಕ್ರಂ ನಾಥ್‌ ಅವರಿದ್ದ ಪೀಠವು ಇದೇ ಸಂದರ್ಭದಲ್ಲಿ ಗಮನಕ್ಕೆ ತೆಗೆದುಕೊಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT