ಮುಂಬೈ: 2008ರ ಮಾಲೆಗಾಂವ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್, ಕರ್ನಲ್ ಪ್ರಸಾದ್ ಪುರೋಹಿತ್ ಸೇರಿದಂತೆ 7 ಆರೋಪಿಗಳನ್ನು ಖುಲಾಸೆಗೊಳಿಸಿ ಇಲ್ಲಿನ ವಿಶೇಷ ನ್ಯಾಯಾಲಯ ಆದೇಶಿಸಿದ್ದು ಈ ತೀರ್ಪನ್ನು ಮಹಾರಾಷ್ಟ್ರ ಸರ್ಕಾರ ಬಾಂಬೆ ಹೈಕೋರ್ಟ್ನಲ್ಲಿ ಪ್ರಶ್ನಿಸಬೇಕು ಎಂದು ಎಐಎಂಐಎಂ ನಾಯಕ ಇಮ್ತಿಯಾಜ್ ಜಲೀಲ್ ಗುರುವಾರ ಆಗ್ರಹಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಇತ್ತೀಚೆಗಷ್ಟೆ ಬಾಂಬೆ ಹೈಕೋರ್ಟ್ 2006ರ ಮುಂಬೈ ರೈಲು ಸ್ಫೋಟ ಪ್ರಕರಣದಲ್ಲಿ 12 ಆರೋಪಿಗಳನ್ನು ಮುಕ್ತಗೊಳಿಸಿದೆ, ಈಗ ಮಾಲೆಗಾಂವ್ ಸ್ಫೋಟ ಪ್ರಕರಣದ 7 ಆರೋಪಿಗಳನ್ನು ಖುಲಾಸೆಗೊಳಿಸಿ ವಿಶೇಷ ನ್ಯಾಯಾಲಯ ಆದೇಶಿದೆ. ಹಾಗಾದರೆ ಈ ಸ್ಫೋಟಗಳಿಗೆ ಹೊಣೆ ಯಾರು? ಯಾರು ನಿಜವಾದ ಅಪರಾಧಿಗಳು? ಎಂದು ಅವರು ಪ್ರಶ್ನೆ ಮಾಡಿದ್ದಾರೆ.

2008ರ ಸೆಪ್ಟೆಂಬರ್ 29 ರಂದು ಮುಂಬೈನಿಂದ ಸುಮಾರು 200 ಕಿ.ಮೀ ದೂರದಲ್ಲಿರುವ ಮಾಲೆಗಾಂವ್ ಪಟ್ಟಣದ ಮಸೀದಿಯ ಬಳಿ ಮೋಟಾರ್ ಸೈಕಲ್ಗೆ ಕಟ್ಟಲಾಗಿದ್ದ ಸ್ಫೋಟಕ ಸಾಧನ ಸ್ಫೋಟಗೊಂಡು ಆರು ಜನರು ಸಾವಿಗೀಡಾದರೆ, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.
.ಮಾಲೆಗಾಂವ್ ಸ್ಫೋಟ ಪ್ರಕರಣ: ಜಾಮೀನು ನಿರಾಕರಣೆ.2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಪ್ರಜ್ಞಾ ಸಿಂಗ್ ಸೇರಿ 7 ಆರೋಪಿಗಳು ಖುಲಾಸೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.