ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

AAP ಸಂಸದೆ ಸ್ವಾತಿ ಮಾಲಿವಾಲ್ ಮೇಲೆ ಹಲ್ಲೆ ನಡೆದಿರುವುದು ದೃಢ: ವೈದ್ಯಕೀಯ ವರದಿ

ಎಎಪಿಯ ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್‌ ಅವರ ಮೇಲೆ ಹಲ್ಲೆ ನಡೆದಿರುವುದು ಖಚಿತಪಟ್ಟಿದೆ ಎಂದು ವೈದ್ಯಕೀಯ ವರದಿ ಹೇಳಿದೆ.
Published 18 ಮೇ 2024, 6:44 IST
Last Updated 18 ಮೇ 2024, 6:44 IST
ಅಕ್ಷರ ಗಾತ್ರ

ನವದೆಹಲಿ: ಎಎಪಿಯ ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್‌ ಅವರ ಮೇಲೆ ಹಲ್ಲೆ ನಡೆದಿರುವುದು ಖಚಿತಪಟ್ಟಿದೆ ಎಂದು ವೈದ್ಯಕೀಯ ವರದಿ ಹೇಳಿದೆ.

ಶನಿವಾರ ಸ್ವಾತಿ ಮಾಲಿವಾಲ್ ಅವರ ವೈದ್ಯಕೀಯ ವರದಿ ಬಂದಿದ್ದು, ಅದರ ಪ್ರಕಾರ ಎಡಗಾಲಿಗೆ ಮತ್ತು ಬಲ ಕೆನ್ನೆಗೆ ಬಲವಾದ ಪೆಟ್ಟು ಬಿದ್ದಿದೆ ಎಂದು ಹೇಳಲಾಗಿದೆ.

ಏಮ್ಸ್‌ ವೈದ್ಯರು ಈ ವೈದ್ಯಕೀಯ ವರದಿ ನೀಡಿದ್ದಾರೆ.

‘ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ಆಪ್ತ ಸಹಾಯಕ ಭಿಭವ್‌ ಕುಮಾರ್‌ ನನಗೆ ಹಲವು ಬಾರಿ ಬಲವಾಗಿ ಒದ್ದಿದ್ದಲ್ಲದೇ, ಏಳೆಂಟು ಬಾರಿ ಕಪಾಳಕ್ಕೂ ಹೊಡೆದಿದ್ದಾನೆ’ ಎಂದು ಎಎಪಿಯ ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್‌ ಅವರು ಆರೋಪಿಸಿ ದ್ದಾರೆ. ಮುಖ್ಯಮಂತ್ರಿಯ ಅಧಿಕೃತ ನಿವಾಸದಲ್ಲಿ ಇದು ನಡೆದಿದೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ವಿವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT