ನವದೆಹಲಿ: ತಮ್ಮ ವಿರುದ್ಧ ಪ್ರಕರಣ ದಾಖಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಜಾ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಮರುಪರಿಶೀಲನಾ ಅರ್ಜಿಯು ಕಾನೂನಿನ ದುರುಪಯೋಗ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಕೇವಲ ರಾಜಕೀಯ ಸಿದ್ದಾಂತದ ಟೀಕೆಯನ್ನು ‘ದ್ವೇಷ ಭಾಷಣ’ ಅಥವಾ ‘ಮಾನನಷ್ಟ’ ಎಂದು ಅಸ್ಪಷ್ಟವಾಗಿ ವರ್ಗೀಕರಿಸಲಾಗುತ್ತಿದೆ’ ಎಂದು ಅವರು ವಾದಿಸಿದ್ದಾರೆ. ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸುವಂತೆ ಕೋರಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜಿತೇಂದ್ರ ಸಿಂಗ್ ಅವರ ಮುಂದೆ ಬುಧವಾರ ಖರ್ಗೆ ಅವರು ಪ್ರತಿಕ್ರಿಯೆ ಸಲ್ಲಿಸಿದ್ದಾರೆ.

‘2023ರ ಏಪ್ರಿಲ್ 27ರಂದು ಕರ್ನಾಟಕದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಟುವಾದ ಹೇಳಿಕೆ ನೀಡಿದ್ದಾರೆ. ಅವರ ಭಾಷಣವು ದ್ವೇಷ ಭಾಷಣ ಹಾಗೂ ಮಾನನಷ್ಟದ ಕೃತ್ಯ’ ಎಂದು ಆರೋಪಿಸಿ ವಕೀಲರು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.

ಅವರ ವಿರುದ್ಧ ಎಫ್ಐಆರ್ ದಾಖಲಿಸಲು ನಿರ್ದೇಶನ ನೀಡಬೇಕು ಎಂದು ಕೋರಿ ವಕೀಲರು ಸಲ್ಲಿಸಿದ್ದ ದೂರನ್ನು ಕಳೆದ ವರ್ಷದ ಡಿಸೆಂಬರ್ನಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ತಿರಸ್ಕರಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.