ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

G20 Summit: ಔತಣಕೂಟಕ್ಕೆ ಮಲ್ಲಿಕಾರ್ಜುನ ಖರ್ಗೆಗೆ ಆಹ್ವಾನ ಇಲ್ಲ 

Published 8 ಸೆಪ್ಟೆಂಬರ್ 2023, 6:10 IST
Last Updated 8 ಸೆಪ್ಟೆಂಬರ್ 2023, 6:10 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಆಯೋಜಿಸಿರುವ ಜಿ 20 ಶೃಂಗಸಭೆಯ ಔತಣಕೂಟಕ್ಕೆ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನ ನೀಡಿಲ್ಲ.

ಈ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿ ಮೂಲಗಳು ತಿಳಿಸಿವೆ. ದೇಶದ ಬೇರೆ ಯಾವುದೇ ರಾಜಕೀಯ ಪಕ್ಷದ ನಾಯಕರನ್ನು ಈ ಔತಣಕೂಟಕ್ಕೆ ಆಹ್ವಾನಿಸಲಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ಈ ಔತಣಕೂಟಕ್ಕೆ ಕ್ಯಾಬಿನೆಟ್‌ ಸಚಿವರು, ರಾಜ್ಯಸಚಿವರು, ಎಲ್ಲ ಮುಖ್ಯಮಂತ್ರಿಗಳು, ಸರ್ಕಾರದ ಎಲ್ಲ ಕಾರ್ಯದರ್ಶಿಗಳು ಹಾಗೂ ದೊಡ್ಡ ಕೈಗಾರಿಕೋದ್ಯಮಿಗಳು ಸೇರಿದಂತೆ ಆಯ್ದ ಗೌರವಾನ್ವಿತ ಅತಿಥಿಗಳನ್ನು ಆಹ್ವಾನಿಸಲಾಗಿದೆ.

ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆ ವಿರೋಧ ಪಕ್ಷದ ನಾಯಕರಾಗಿದ್ದು ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ಹೊಂದಿದ್ದಾರೆ. ಅವರು ದೇಶದ ಅತಿದೊಡ್ಡ ವಿರೋಧ ಪಕ್ಷವಾಗಿರುವ ಕಾಂಗ್ರೆಸ್‌ ಅಧ್ಯಕ್ಷರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT