ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಸರ್ಕಾರದ ವೈಫಲ್ಯಗಳ ’ಕಪ್ಪು ಪತ್ರ’ ಬಿಡುಗಡೆ ಮಾಡಿದ ಮಲ್ಲಿಕಾರ್ಜುನ ಖರ್ಗೆ

Published 8 ಫೆಬ್ರುವರಿ 2024, 6:10 IST
Last Updated 8 ಫೆಬ್ರುವರಿ 2024, 6:10 IST
ಅಕ್ಷರ ಗಾತ್ರ

ನವದೆಹಲಿ: 2014ರಿಂದ ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವೈಫಲ್ಯಗಳನ್ನು ಪಟ್ಟಿ ಮಾಡಿರುವ ‘ಕಪ್ಪು ಪತ್ರ’ವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗುರುವಾರ ಇಲ್ಲಿ ಬಿಡುಗಡೆ ಮಾಡಿದರು.

’10 ವರ್ಷಗಳ ಅನ್ಯಾಯ ಕಾಲ’ ಎಂದು ಈ ‘ಕಪ್ಪು ಪತ್ರ’ಕ್ಕೆ ಹೆಸರಿಡಲಾಗಿದೆ.

ಯುಪಿಎ ಸರ್ಕಾರದ ಅವಧಿಯ ಶ್ವೇತ ಪತ್ರವನ್ನು ಬಿಡುಗಡೆ ಮಾಡಲಿದೆ ಎಂದು ಕೇಂದ್ರ ಸರ್ಕಾರ ಹೇಳಿದ ಬೆನ್ನಲ್ಲೇ ಕಾಂಗ್ರೆಸ್‌ ‘ಕಪ್ಪು ಪತ್ರ’ ಬಿಡುಗಡೆಗೊಳಿಸಿದೆ.

‘ಕಾಂಗ್ರೆಸ್ ಆಡಳಿತ ಇರುವ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸಹಾಯ ಮಾಡುತ್ತಿಲ್ಲ. ಅನುದಾನ ಬಿಡುಗಡೆ ಮಾಡಿದರೂ, ರಾಜ್ಯಗಳು ಅದನ್ನು ಸರಿಯಾಗಿ ಬಳಸಿಕೊಳ್ಳುತ್ತಿಲ್ಲ ಎಂದು ಆರೋಪಿಸುತ್ತದೆ’ ಎಂದು ‘ಕಪ್ಪು ಪತ್ರ' ಬಿಡುಗಡೆ ವೇಳೆ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಹಣದುಬ್ಬರ ಹೆಚ್ಚಳವಾಗಿದೆ. ಕಾಂಗ್ರೆಸ್‌ ಇತಿಹಾಸವನ್ನು ಕೆದಕುವುದರಿಂದ ಏನೂ ಬದಲಾವಣೆ ಆಗದು ಎಂದು ಅವರು ಹೇಳಿದರು.

ಈ ವೇಳೆ ಕಾಂಗ್ರೆಸ್‌ ನಾಯಕರಾದ ಪವನ್‌ ಖೇರಾ, ರಾಜ್ಯಸಭಾ ಸಂಸದ ನಾಸಿರ್‌ ಹುಸೇನ್ ಹಾಗೂ ಶಾಸಕ ಆರ್‌.ವಿ. ದೇಶಪಾಂಡೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT