ನವದೆಹಲಿ: ಕೆಂಪು ಕೋಟೆಯಲ್ಲಿ ನಡೆದ 77ನೇ ಸ್ವಾತಂತ್ರ್ಯ ದಿನದ ಕಾರ್ಯಕ್ರಮಕ್ಕೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗೈರಾಗಿರುವುದಕ್ಕೆ ಕಾರಣಗಳನ್ನು ನೀಡಿದ್ದಾರೆ.

ಕೆಂಪು ಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ಮಾಡಿ ದೇಶವನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮಕ್ಕೆ ಮಲ್ಲಿಕಾರ್ಜುನ ಖರ್ಗೆ ಗೈರಾಗಿದ್ದರು. ಅವರಿಗಾಗಿ ಮೀಸಲಿಟ್ಟಿದ್ದ ಕುರ್ಚಿ ಖಾಲಿ ಇತ್ತು. ಇದರ ಫೋಟೊವನ್ನು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ನನಗೆ ಕಣ್ಣಿನ ಸಮಸ್ಯೆ ಇತ್ತು ಹಾಗೂ ನಿವಾಸ ಮತ್ತು ಪಕ್ಷದ ಕಚೇರಿಯಲ್ಲಿ ಧ್ವಜಾರೋಹಣ ಮಾಡಬೇಕಾಗಿತ್ತು. ಸಮಯದ ಅಭಾವ ಹಾಗೂ ಭದ್ರತಾ ಕಾರಣಗಳಿಂದ ಕೆಂಪು ಕೋಟೆಗೆ ಹೋಗಿ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಈ ಕಾರಣಗಳಿಂದಾಗಿ ನಾನು ಕೆಂಪು ಕೋಟೆ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ ಎಂದು ಖರ್ಗೆ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
.Independence Day | ಪ್ರಧಾನಿ ಮೋದಿ ಸ್ವಾತಂತ್ರ್ಯೋತ್ಸವ ಭಾಷಣದ ಮುಖ್ಯಾಂಶಗಳು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.