ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲು ಪ್ರಯಾಣಿಕರಿಗೆ ಅಗತ್ಯ ಸುರಕ್ಷತೆ ಒದಗಿಸಬೇಕು: ಕೇಂದ್ರಕ್ಕೆ ಮಮತಾ ಒತ್ತಾಯ

Published 19 ನವೆಂಬರ್ 2023, 10:24 IST
Last Updated 19 ನವೆಂಬರ್ 2023, 10:24 IST
ಅಕ್ಷರ ಗಾತ್ರ

ಕೊಲ್ಕತ್ತ: ರೈಲಿನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಹೆಚ್ಚಿನ ಸುರಕ್ಷತೆ ಒದಗಿಸಬೇಕು. ಹಾಗೂ ರೈಲು ಟಿಕೆಟ್‌ ಬೆಲೆಗಳ ಮೇಲೆ ವಿಧಿಸುವ ಹೆಚ್ಚಿನ ದರವನ್ನು ಹಿಂಪಡೆಯಬೇಕು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬಾನ್ಯರ್ಜಿ ಹೇಳಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ರೈಲು ದರಗಳು ಕೆಲವೊಮ್ಮೆ ವಿಮಾನ ದರಗಳಿಗಿಂತ ದುಬಾರಿಯಾಗಿರುತ್ತದೆ. ರೈಲಿನಲ್ಲಿ ಪ್ರಯಾಣಿಸುವ ಪ್ರತಿಯೊಬ್ಬರಿಗೂ ಸುರಕ್ಷತೆ ಮತ್ತು ಸುಭದ್ರತೆ ಒದಗಿಸಬೇಕು. ರೈಲಿನ ದರಗಳು ದುಬಾರಿಯಾದರೆ ಸಾಮಾನ್ಯ ಜನರು ಹೇಗೆ ಪ್ರಯಾಣಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

‘ಈ ಹಿಂದೆ ನಾನು ರೈಲ್ವೆ ಸಚಿವೆಯಾಗಿದ್ದ ಸಮಯದಲ್ಲಿ ಅಪಘಾತ ನಿಯಂತ್ರಣ ಸಾಧನಗಳು ಹಾಗೂ ಅದಕ್ಕೆ ಸಂಬಂಧಿಸಿದ ಸುರಕ್ಷತಾ ಕ್ರಮಗಳನ್ನು ಪರಿಚಯಿಸಿದ್ದೆ. ಏಕೆ ಅವುಗಳನ್ನು ಪಾಲಿಸುತ್ತಿಲ್ಲವೇ?. ಎಂದರಲ್ಲದೆ ಇತ್ತೀಚಿನ ದಿನಗಳಲ್ಲಿ ಏಕೆ ರೈಲು ಅಪಘಾತಗಳು ಹೆಚ್ಚುತ್ತಿವೆ, ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುತ್ತಿಲ್ಲವೇ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT