ಹೌರಾ: ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ ಪಡೆಯಲು ಕೇಂದ್ರ ಸರ್ಕಾರ ವಿಫಲವಾಗಿರುವ ಬೆನ್ನಲ್ಲೇ ಬಿಜೆಪಿಯ ಅವನತಿ ಆರಂಭಗೊಂಡಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶನಿವಾರ ಟೀಕಿಸಿದರು.

ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು ‘ನಾವು ಬಿಜೆಪಿಯನ್ನು ಸೋಲಿಸಿದ್ದೇವೆ. ಅವರಿಗೆ ಅವಮಾನ ಮಾಡಿದ್ದೇವೆ. ಅವರಿಗೆ ಬಹುಮತವಿಲ್ಲ. ಮಿತ್ರಪಕ್ಷಗಳ ಬೆಂಬಲದಿಂದ ಮಾತ್ರ ಅಧಿಕಾರದಲ್ಲಿ ಉಳಿದಿದ್ದಾರೆ’ ಎಂದು ಮಮತಾ ಹೇಳಿದರು.

‘ದೇಶವನ್ನು ವಿಭಜಿಸುವ ಉದ್ದೇಶದಿಂದ ಅವರು ಕ್ಷೇತ್ರ ಪುನರ್ವಿಂಗಡಣೆ ಮಾಡಲು ಬಯಸಿದ್ದರು. ಮಹಿಳೆಯರಿಗೆ ಪ್ರಾತಿನಿಧ್ಯ ನೀಡಲು ಮಸೂದೆಯ ಅಗತ್ಯವಿಲ್ಲ’ ಎಂದರು.

‘ನಮ್ಮ ಪಕ್ಷದಲ್ಲಿ ಮಹಿಳೆಯರ ಪ್ರಾತಿನಿಧ್ಯ ಹೆಚ್ಚಿದೆ. ಟಿಎಂಸಿಯ ಶೇಕಡ ಶೇ 36ರಷ್ಟು ಮಹಿಳಾ ಸಂಸದರು ಲೋಕಸಭೆಯಲ್ಲಿ ಮತ್ತು ಶೇ 46ರಷ್ಟು ಮಹಿಳಾ ಸಂಸದರು ರಾಜ್ಯಸಭೆಯಲ್ಲಿದ್ದಾರೆ. ಬಿಜೆಪಿ ನಮ್ಮನ್ನು ನೋಡಿ ಕಲಿಯಲಿ. 1998ರಿಂದಲೇ ನಾನು ಮಹಿಳಾ ಮೀಸಲಾತಿಗಾಗಿ ಹೋರಾಡುತ್ತಿದ್ದೇನೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.