ಕೋಲ್ಕತ್ತ: ಚುನಾವಣೋತ್ತರ ಹಿಂಸಾಚಾರ ತಡೆಯಲು ವಿಫಲರಾಗಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ರೋಮ್‌ನ ವಿಶ್ವ ಶಾಂತಿ ಸಭೆಯಲ್ಲಿ ಭಾಗವಹಿಸುವ ಹಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿ ಹೇಳಿದ್ದಾರೆ.

ಖೇಜುರಿ, ನಂದಿಗ್ರಾಮ, ಪುರ್ಬಾ ಮೇದಿನಿಪುರ ಜಿಲ್ಲೆ ಹಾಗೂ ರಾಜ್ಯದ ಇತರೆಡೆಗಳಲ್ಲಿ ನಡೆದ ಚುನಾವಣೋತ್ತರ ಹಿಂಸಾಚಾರದಲ್ಲಿ ಶಾಮೀಲಾದವರ ಬಂಧನಕ್ಕೆ ಮಮತಾ ಕ್ರಮ ಕೈಗೊಳ್ಳುತ್ತಿಲ್ಲ ಎಂದೂ ಅವರು ಆರೋಪಿಸಿದ್ದಾರೆ.

ಓದಿ:ರೋಮ್‌ನ ವಿಶ್ವ ಶಾಂತಿ ಸಭೆಯಲ್ಲಿ ಭಾಗವಹಿಸಲು ಮೋದಿ ನನಗೆ ಅನುಮತಿ ನೀಡಲಿಲ್ಲ: ಮಮತಾ

‘ನೀವು ಶಾಂತಿ ಸಭೆಯಲ್ಲಿ ಭಾಗವಹಿಸಲು ಅರ್ಹರಲ್ಲ. ನಮ್ಮ (ಬಿಜೆಪಿ) ಕಾರ್ಯಕರ್ತರ ಮೇಲೆ ದಾಳಿ ಮಾಡಿದವರಿಗೆ ಮತ್ತು ಟಿಎಂಸಿ ಕಾರ್ಯಕರ್ತರ ಹಿಂಸಾತ್ಮಕ ಕೃತ್ಯಗಳಿಗೆ ನೀವು ಕುಮ್ಮಕ್ಕು ನೀಡಿದ್ದೀರಿ’ ಎಂದು ಅಧಿಕಾರಿ ಮಮತಾ ಅವರನ್ನು ಉದ್ದೇಶಿಸಿ ಹೇಳಿದ್ದಾರೆ.

ರೋಮ್‌ನಲ್ಲಿ ನಡೆಯಲಿರುವ ವಿಶ್ವ ಶಾಂತಿಯ ಕುರಿತ ಸಭೆಯಲ್ಲಿ ಭಾಗವಹಿಸಲು ಕೇಂದ್ರ ಸರ್ಕಾರ ನನಗೆ ಅನುಮತಿ ನಿರಾಕರಿಸಿದೆ ಎಂದು ಮಮತಾ ಬ್ಯಾನರ್ಜಿ ಇತ್ತೀಚೆಗೆ ಆರೋಪಿಸಿದ್ದರು. ಮುಖ್ಯಮಂತ್ರಿಯೊಬ್ಬರಿಗೆ ಹೀಗೆ ಮಾಡಿದ್ದು ಸರಿಯಲ್ಲ ಎಂದೂ ಅವರು ಅಸಮಾಧಾನ ವ್ಯಕ್ತಪಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.