ಕೂಚ್ ಬೆಹಾರ್: ದೇಶವನ್ನು ಛಿದ್ರ ಮಾಡುವಂತಹ ಕ್ಷೇತ್ರ ಮರುವಿಂಗಡಣೆ ಮಸೂದೆ ತರುವ ಚಿತಾವಣಿಯಲ್ಲಿ ಮಹಿಳಾ ಮೀಸಲಾತಿ ಕಾನೂನಿಗೆ ತಿದ್ದುಪಡಿಯನ್ನು ಉಪಯೋಗಿಸಲಾಗುತ್ತಿದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಟಿಎಂಸಿ ಪ್ರತಿ ಹಂತದಲ್ಲೂ ಕೇಂದ್ರ ಸರ್ಕಾರದ ಈ ನಡೆ ವಿರುದ್ಧ ಹೋರಾಡುತ್ತದೆ ಎಂದು ಅವರು ಇಲ್ಲಿ ನಡೆದ ತಮ್ಮ ಪಕ್ಷದ ಚುನಾವಣಾ ರ್ಯಾಲಿಯಲ್ಲಿ ಪ್ರತಿಪಾದಿಸಿದ್ದಾರೆ.

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಗುರುವಾರ ಸಂವಿಧಾನಕ್ಕೆ 131ನೇ ತಿದ್ದುಪಡಿ ಮಸೂದೆ ಮಂಡಿಸಲಾಯಿತು. ಇದರ ಜೊತೆಗೆ, ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಮತ್ತು ಪ್ರಸ್ತಾಪಿತ ಮಹಿಳಾ ಮೀಸಲಾತಿಯನ್ನು ಕೇಂದ್ರಾಡಳಿತ ಪ್ರದೇಶಗಳಾದ ದೆಹಲಿ, ಪುದುಚೇರಿ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಜಾರಿಗೆ ತರುವ ಉದ್ದೇಶದಿಂದ ಕೇಂದ್ರಾಡಳಿತ ಪ್ರದೇಶಗಳ ತಿದ್ದುಪಡಿ ಮಸೂದೆಯನ್ನೂ ಸಹ ಮಂಡಿಸಲಾಗಿತ್ತು.

ಸಂವಿಧಾನ ತಿದ್ದುಪಡಿ ಮಸೂದೆ ಅಡಿ ಲೋಕಸಭೆಯಲ್ಲಿರುವ 543 ಸ್ಥಾನಗಳ ಸಂಖ್ಯೆ ಗರಿಷ್ಠ 850ಕ್ಕೆ ಹೆಚ್ಚಳವಾಗಲಿವೆ. 2011ರ ಜನಗಣತಿ ಅನ್ವಯ 2029ರ ಲೋಕಸಭೆ ಚುನಾವಣೆಗೂ ಮುನ್ನವೇ ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮಹಿಳಾ ಮೀಸಲಾತಿ ಜಾರಿಗೆ ಬರಲಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲೂ ವಿಧಾನಸಭಾ ಕ್ಷೇತ್ರಗಳ ಸಂಖ್ಯೆ ಹೆಚ್ಚಾಗಲಿವೆ.

ಮಹಿಳಾ ಮೀಸಲಾತಿ ಮಸೂದೆಯನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರವು ಕ್ಷೇತ್ರ ಪುನರ್ವಿಂಗಡಣೆ ಮಸೂದೆಯನ್ನು ಮುನ್ನೆಲೆಗೆ ತಂದಿದೆ ಎಂದು ಮಮತಾ ಆರೋಪಿಸಿದ್ದಾರೆ.

ಕ್ಷೇತ್ರ ಪುನರ್ವಿಂಗಡಣೆ ಮೂಲಕ ಲೋಕಸಭಾ ಸ್ಥಾನಗಳನ್ನು 850ರವರೆಗೆ ವಿಸ್ತರಣೆಗೆ ಬಿಜೆಪಿ ಮುಂದಾಗಿದ್ದು, ಇದು ದೇಶವನ್ನು ತುಂಡು ತುಂಡುಗಳಾಗಿ ಛಿದ್ರ ಮಾಡುತ್ತದೆ ಎಂದಿದ್ದಾರೆ.

ಕೇಂದ್ರದ ಎನ್ಡಿಎ ಸರ್ಕಾರವು ಮಸೂದೆಗಳ ವಿಚಾರದಲ್ಲಿ ಅಕ್ರಮ ನಡೆಸಿದೆ ಎಂದು ಆರೋಪಿಸಿದ ಅವರು, ಮೂರನೇ ಎರಡರಷ್ಟು ಬಹುಮತವಿಲ್ಲದೆ, ಸಂವಿಧಾನ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಲು ಸಾಧ್ಯವಿಲ್ಲ ಎಂಬುದು ಮಾಜಿ ಸಂಸದೆಯಾಗಿ ನನಗೆ ತಿಳಿದಿದೆ ಎಂದು ಹೇಳಿದ್ದಾರೆ.

ಮಸೂದೆಗಳನ್ನು ಸರಳ ಬಹುಮತದೊಂದಿಗೆ ಅಂಗೀಕರಿಸಲು ಪ್ರಯತ್ನಿಸಲಾಗುತ್ತಿದೆ ಎಂದು ತಮ್ಮ ಸಂಸದರು ಮಾಹಿತಿ ನೀಡಿದ್ದಾರೆ ಎಂದು ಹೇಳಿದ್ದಾರೆ.

ತಮ್ಮ ಪಕ್ಷವು ಈಗಾಗಲೇ ಶೇ 37ರಷ್ಟು ಮಹಿಳಾ ಸಂಸದರನ್ನು ಹೊಂದಿದೆ ಎಂದ ಅವರು, ಬಿಜೆಪಿಗೆ ಇದನ್ನು ಅನುಕರಿಸುವಂತೆ ಒತ್ತಾಯಿಸಿದರು.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ಬಳಿಕ ದೆಹಲಿಯಲ್ಲಿ ಬಿಜೆಪಿ ಆಡಳಿತವನ್ನು ಕೊನೆಗೊಳಿಸುತ್ತೇವೆ ಎಂದು ಹೇಳಿದರು.

y.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.