ಕೋಲ್ಕತ್ತ: ಬಿಜೆಪಿ ಕಾರ್ಯಕರ್ತರು ಮತ್ತು ಅವರ ಸಹಾಯಕ ಏಜೆನ್ಸಿಗಳು ನಾವು ಧರಣಿ ಮಾಡುತ್ತಿರುವ ಸ್ಥಳದಲ್ಲಿ ಕರಪತ್ರ ಹಂಚುವ ಮೂಲಕ ಜನರ ದಾರಿತಪ್ಪಿಸುವ ಕೆಲಸ ಮಾಡುತ್ತಿವೆ. ಅವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಟಿಎಂಸಿ ಕಾರ್ಯಕರ್ತರಿಗೆ ಸೋಮವಾರ ಹೇಳಿದ್ದಾರೆ.

ಚುನಾವಣಾ ಆಯೋಗವು ನಡೆಸಿದ್ದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಬಳಿಕ, ಪಟ್ಟಿಯಿಂದ ಮತದಾರರ ಹೆಸರುಗಳನ್ನು ಮನ ಬಂದಂತೆ ತೆಗೆಯಲಾಗಿದೆ ಎಂದು ಆರೋಪಿಸಿ ಮಮತಾ ಬ್ಯಾನರ್ಜಿ ಅವರು ಶುಕ್ರವಾರದಿಂದ ಧರಣಿ ಆರಂಭಿಸಿದ್ದಾರೆ. ಇದರಿಂದಾಗಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಚುನಾವಣಾ ಆಯೋಗದ ನಡುವಿನ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ.

ಮಾರ್ಚ್ 14ರಂದು ಕೋಲ್ಕತ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರ್ಯಾಲಿ ಇರುವುದರಿಂದ ಬಿಜೆಪಿ ಕಾರ್ಯಕರ್ತರು ಆ ಕಾರ್ಯಕ್ರಮದ ಕುರಿತಾದ ಕರಪತ್ರಗಳನ್ನು ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ಜಾಗದಲ್ಲಿ ಹಂಚುತ್ತಿದ್ದಾರೆ ಎಂದು ಬ್ಯಾನರ್ಜಿ ಆರೋಪಿಸಿದ್ದಾರೆ.

ಬೇರೊಂದು ಪಕ್ಷವು ಪ್ರತಿಭಟನೆ ಮಾಡುತ್ತಿರುವ ಸ್ಥಳದಲ್ಲಿ ಬಂದು ತಮ್ಮ ಕಾರ್ಯಕ್ರಮದ ಕರಪತ್ರಗಳನ್ನು ಹಂಚುವ ಅಧಿಕಾರ ಯಾರಿಗೂ ಇಲ್ಲ. ಅವರನ್ನು ಹಿಡಿದು, ಪೊಲೀಸರಿಗೊಪ್ಪಿಸಿ ಎಂದು ಟಿಎಂಸಿ ಕಾರ್ಯಕರ್ತರಿಗೆ ಹೇಳಿದ್ದಾರೆ.

ಕರಪತ್ರ ಹಂಚುತ್ತಿದ್ದವರು ಸಿಕ್ಕಿಬೀಳುವ ಭಯದಿಂದ ಸ್ಥಳದಿಂದ ಓಡಿ ಹೋಗಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ ಎಂದು ಹೇಳಿದ್ದಾರೆ.

ಬಿಜೆಪಿಗೆ ಜನರ ಬೆಂಬಲವಿಲ್ಲ. ಅವರು ಮತಗಳವು ಹಾಗೂ ಚುನಾವಣಾ ಆಯೋಗದ ಸಹಾಯದಿಂದ ಚುನಾವಣಾ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.