ಕೋಲ್ಕತ್ತ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

ಬಿಜೆಪಿಯ ಕಟು ಟೀಕಾಕಾರರಾಗಿರುವ ಮಮತಾ ಅವರು, ಮೋದಿಯ ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸಿದ್ದಾರೆ.

‘ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಜೀ ಅವರಿಗೆ 72 ನೇ ಜನ್ಮದಿನದ ಹೃತ್ಪೂರ್ವಕ ಶುಭಾಶಯಗಳು. ನಿಮ್ಮ ಉತ್ತಮ ಆರೋಗ್ಯ ಮತ್ತು ಸಂತೋಷಕ್ಕಾಗಿ ನಾನು ದೇವರನ್ನು ಪ್ರಾರ್ಥಿಸುತ್ತೇನೆ’ ಎಂದು ಮಮತಾ ಟ್ವೀಟ್ ಮಾಡಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು 73ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ.

ಮೋದಿ ಅವರ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಲು ನಿರ್ಧರಿಸಿರುವ ಬಿಜೆಪಿ, ಇಂದು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ದಿನವನ್ನು ಜನಸ್ನೇಹಿ ಕಾರ್ಯಕ್ರಮವನ್ನಾಗಿ ದೇಶದೆಲ್ಲೆಡೆ ಆಚರಿಸಲಾಗಿದೆ.

ಹಲವು ಕಡೆಗಳಲ್ಲಿ ರಕ್ತದಾನ ಶಿಬಿರಗಳನ್ನು ಏರ್ಪಾಡು ಮಾಡಲಾಗಿದೆ. ನಮೀಬಿಯಾದಿಂದ ತರಲಾಗುತ್ತಿರುವ ಎಂಟು ಚಿರತೆಗಳನ್ನು ಮೋದಿ ಅವರು ಇಂದು ಕುನೊ ರಾಷ್ಟ್ರೀಯ ಉದ್ಯಾನಕ್ಕೆ ಹಸ್ತಾಂತರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.