ಕೋಲ್ಕತ್ತ: ಪ್ರೇಮಿಗಳ ದಿನಕ್ಕೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶುಭಾಶಯ ಕೋರಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಾಗ, ಪ್ರೇಮಿಗಳ ದಿನಕ್ಕೆ ಮೊದಲ ಬಾರಿಗೆ ಶುಭಾಶಯ ಕೋರಿರುವುದು ಚರ್ಚೆಗೆ ಗ್ರಾಸವಾಗಿದೆ.

ಯುವ ಮತದಾರರನ್ನು ಸೆಳೆಯಲು ಮಮತಾ ಬ್ಯಾನರ್ಜಿ ಅವರು ಶುಭಾಶಯ ಕೋರಿದ್ದಾರೆ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.

‘ಜಾತಿ, ಮತ, ವರ್ಗ, ಧರ್ಮವನ್ನು ಮೀರಿದ್ದು ಪ್ರೀತಿ. ಈ ಪ್ರೀತಿಯ ಮನೋಭಾವವೇ ಸಾರ್ವಜನಿಕ ಸೇವೆಯಲ್ಲಿ ನನ್ನ ಪ್ರಯಾಣಕ್ಕೆ ಮಾರ್ಗದರ್ಶನ ನೀಡಿದೆ. ಜನರ ಮೇಲಿನ ಪ್ರೀತಿಯು, ಬಿರುಗಾಳಿಯನ್ನು ತಡೆದುಕೊಳ್ಳುವಷ್ಟು ಪ್ರಬಲವಾಗಿದೆ. ಆಲಿಸುವ ತಾಳ್ಮೆ ನೀಡಿದೆ. ನ್ಯಾಯ ಮತ್ತು ಗೌರವಕ್ಕಾಗಿ ಹೋರಾಡಲು ಶಕ್ತಿ ತುಂಬಿದೆ’ ಎಂದು ‘ಎಕ್ಸ್’ನಲ್ಲಿ ಉಲ್ಲೇಖಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.