ಸಿಲಿಗುರಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಹೊರಟಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಈ ವೇಳೆ ಮಮತಾ ಬ್ಯಾನರ್ಜಿ ಅವರ ಸೊಂಟ ಮತ್ತು ಕಾಲಿಗೆ ಗಾಯವಾಗಿದೆ ಎಂದು ವರದಿಯಾಗಿದೆ. ಅವರು ಕೋಲ್ಕತ್ತಾ ಎಸ್‌ಎಸ್‌ಕೆಎಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು.

ಹವಾಮಾನ ವೈಪರೀತ್ಯದಿಂದಾಗಿ ಸಿಲಿಗುರಿ ಬಳಿಕ ಸೆವೋಕ್ ವಾಯುನೆಲೆಯಲ್ಲಿ ಹೆಲಿಕಾಪ್ಟರ್ ನೆಲಕ್ಕೆ ಇಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಜಲ್‌ಪಾಯಿಗುಢಿಯಲ್ಲಿ ಚುನಾವಣಾ ಪ್ರಚಾರಕ್ಕಾಗಿ ಬಾಗ್‍ಡೋಗ್ರಾ ವಿಮಾನ ನಿಲ್ದಾಣಕ್ಕೆ ತೆರುಳುತ್ತಿದ್ದಾಗ ಬೈಕುಂಠಪುರ ಅರಣ್ಯ ಪ್ರದೇಶದಲ್ಲಿ ಕೆಟ್ಟ ಹವಾಮಾನದಿಂದಾಗಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದೆ.

ಈ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಇದರಿಂದಾಗಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಳಿಕ ರಸ್ತೆ ಹಾದಿಯ ಮೂಲಕ ಮಮತಾ ಬ್ಯಾನರ್ಜಿ ಬಾಗ್‍ಡೋಗ್ರಾ ವಿಮಾನ ನಿಲ್ದಾಣಕ್ಕೆ ಪ್ರಯಾಣ ಮುಂದುವರಿಸಿದರು.

ಪಶ್ಚಿಮ ಬಂಗಾಳದಲ್ಲಿ ಜುಲೈ 8ರಂದು ಪಂಚಾಯತಿ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಉತ್ತರದ ಭಾಗಗಳಲ್ಲಿ ಪ್ರಚಾರ ಕೈಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.