ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪಶ್ಚಿಮ ಬಂಗಾಳ | ದಂಪತಿ ಮೇಲೆ TMC ಮುಖಂಡನಿಂದ ಹಲ್ಲೆ: ಮಮತಾ ವಿರುದ್ಧ ನಡ್ಡಾ ಕಿಡಿ

Published 1 ಜುಲೈ 2024, 4:57 IST
Last Updated 1 ಜುಲೈ 2024, 4:57 IST
ಅಕ್ಷರ ಗಾತ್ರ

ನವದೆಹಲಿ: ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ ಜಿಲ್ಲೆಯ ಚೋಪ್ರಾದಲ್ಲಿ ಸಾರ್ವಜನಿಕವಾಗಿ ದಂಪತಿ ಮೇಲೆ ಟಿಎಂಸಿ ಮುಖಂಡರೊಬ್ಬರು ಅಮಾನುಷವಾಗಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಘಟನೆ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

‘ಪಶ್ಚಿಮ ಬಂಗಾಳದಲ್ಲಿ ಹಲ್ಲೆ ನಡೆಸುತ್ತಿರುವ ಭೀಕರ ವಿಡಿಯೊವೊಂದು ಬೆಳಕಿಗೆ ಬಂದಿದೆ. ಇದು ರಾಜಪ್ರಭುತ್ವದಲ್ಲಿದ್ದ ಕ್ರೌರ್ಯವನ್ನು ನೆನಪಿಸುತ್ತದೆ. ಸಮಾಜದ ಸ್ವಾಥ್ಯ ಹದಗೆಡಿಸುವಂತ ಈ ಕೃತ್ಯವನ್ನು ಟಿಎಂಸಿ ಶಾಸಕರು ಮತ್ತು ಕಾರ್ಯಕರ್ತರು ಸಮರ್ಥಿಸಿಕೊಳ್ಳುತ್ತಿದ್ದಾರೆ’ ಎಂದು ನಡ್ಡಾ ಕಿಡಿಕಾರಿದ್ದಾರೆ.

‘ಮಮತಾ ಬ್ಯಾನರ್ಜಿ (ದೀದಿ) ಆಡಳಿತ ನಡೆಸುತ್ತಿರುವ ಪಶ್ಚಿಮ ಬಂಗಾಳದಲ್ಲಿ ಸಂದೇಶ್‌ಖಾಲಿ, ಉತ್ತರ ದಿನಜ್‌ಪುರ ಸೇರಿದಂತೆ ಇತರ ಹಲವು ಪ್ರದೇಶಗಳು ಮಹಿಳೆಯರಿಗೆ ಸುರಕ್ಷಿತವಾಗಿಲ್ಲ ಎಂಬುದಕ್ಕೆ ಸ್ಪಷ್ಟ ನಿದರ್ಶನ’ ಎಂದು ಅವರು ಟೀಕಿಸಿದ್ದಾರೆ.

ಕಾಂಗರೂ ನ್ಯಾಯಾಲಯದ ತೀರ್ಪಿನ ನಂತರ ಸ್ಥಳೀಯ ಟಿಎಂಸಿ ನಾಯಕರೊಬ್ಬರು ಬಿದಿರಿನ ಕೋಲಿನಿಂದ ದಂಪತಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಆರೋಪಿಯನ್ನು ತಜ್ಮುಲ್ ಅಲಿಯಾಸ್ ಜೆಸಿಬಿ ಎಂದು ಗುರುತಿಸಲಾಗಿದ್ದು, ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT