ಕೋಲ್ಕತ್ತ: ನುಸುಳುಕೋರರ ವೋಟ್ ಬ್ಯಾಂಕ್‌ಗೆ ಧಕ್ಕೆಯಾಗಬಾರದು ಎಂಬ ಕಾರಣಕ್ಕೆ ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪಾಲ್ಗೊಂಡಿಲ್ಲ ಎಂದು ಗೃಹ ಸಚಿವ ಅಮಿತ್ ಶಾ ಮಂಗಳವಾರ ಆರೋಪಿಸಿದ್ದಾರೆ.
.191 ಕ್ಷೇತ್ರಗಳ ಮತದಾನ ಮೋದಿ 3ನೇ ಬಾರಿಗೆ ಅಧಿಕಾರಕ್ಕೇರುವ ಸೂಚನೆ ನೀಡಿದೆ; ಯೋಗಿ.ಪೆನ್ಡ್ರೈವ್ ಕೇಸ್ಗೆ ಬಿಗ್ ಟ್ವಿಸ್ಟ್: ಮಾಹಿತಿ ಕೊಟ್ಟ ಕಾರ್ ಡ್ರೈವರ್.
ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿದ ಅವರು ದೇಶದ ಜನರಿಗೆ ಕುಟುಂಬ ರಾಜಕಾರಣ ಅಥವಾ ರಾಮ ರಾಜ್ಯ ಬೇಕೆ? ಎಂಬುವುದನ್ನು ಈ ಲೋಕಸಭಾ ಚುನಾವಣೆ ನಿರ್ಧರಿಸುತ್ತದೆ ಎಂದು ಹೇಳಿದ್ದಾರೆ.

‘ತಮ್ಮ ವೋಟ್ ಬ್ಯಾಂಕ್ ರಾಜಕಾರಣದ ಮೇಲೆ ಪರಿಣಾಮ ಬೀರುವ ಭಯದಿಂದಾಗಿ ಮಮತಾ ಬ್ಯಾನರ್ಜಿ ಹಾಗೂ ಟಿಎಂಸಿ ನಾಯಕರು ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿರಲಿಲ್ಲ. ಸಂದೇಶ್‌ಖಾಲಿ ಪ್ರಕರಣದ ಆರೋಪಿಗಳನ್ನು ಟಿಎಂಸಿ ಸರ್ಕಾರ ರಕ್ಷಿಸಲು ಪ್ರಯತ್ನಿಸುತ್ತಿದೆ. ಆದರೆ ಕೇಂದ್ರ ಸರ್ಕಾರ ತಪ್ಪಿತಸ್ಥರನ್ನು ಶಿಕ್ಷಿಸುತ್ತದೆ ‘ ಎಂದು ತಿಳಿಸಿದ್ದಾರೆ.
.ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು.ಅರವಿಂದರ್ ರಾಜೀನಾಮೆ: ದೆಹಲಿ ‘ಕೈ’ ಅಧ್ಯಕ್ಷ ಸ್ಥಾನಕ್ಕೆ ದೇವೆಂದರ್ ಯಾದವ್ ನೇಮಕ.
ಈ ಚುನಾವಣೆಯು ಮಮತಾ ಬ್ಯಾನರ್ಜಿ ಅವರ ಸೋದರಳಿಯ (ಅಭಿಷೇಕ್ ಬ್ಯಾನರ್ಜಿ) ಅವರು ಬಂಗಾಳದ ಸಿಎಂ ಆಗುತ್ತಾರೋ ಅಥವಾ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗುತ್ತಾರೋ ಎಂಬುವುದನ್ನು ತಿಳಿಸಲಿದೆ. ಟಿಎಂಸಿ ಸರ್ಕಾರ ಬಿಜೆಪಿ ಕಾರ್ಯಕರ್ತರಿಗೆ ಎಷ್ಟೇ ಹಿಂಸೆ ನೀಡುತ್ತಿದ್ದರೂ ಅವರ ( ಟಿಎಂಸಿ ನಾಯಕರ) ಸೋಲು ಹತ್ತಿರದಲ್ಲಿದೆ ಎಂದು ಹೇಳಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.