ಮುಂಬೈ: ‘ಇಂಡಿಯಾ ಮೈತ್ರಿಕೂಟದ ನಾಯಕತ್ವ ವಹಿಸಲು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಮರ್ಥರಾಗಿದ್ದಾರೆ’ ಎಂದು ಎನ್ಸಿಪಿ(ಶರದ್ಚಂದ್ರ ಪವಾರ್ ಬಣ) ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಪವಾರ್, ‘ಮಮತಾ ಬ್ಯಾನರ್ಜಿ ಅವರು ದೇಶದ ಸಮರ್ಥ ನಾಯಕರಲ್ಲಿ ಒಬ್ಬರಾಗಿದ್ದು, ಇಂಡಿಯಾ ಮೈತ್ರಿಕೂಟದ ನಾಯಕತ್ವದ ಬಗ್ಗೆ ಮಾತನಾಡುವ ಹಕ್ಕನ್ನು ಹೊಂದಿದ್ದಾರೆ. ಅಲ್ಲದೇ ಪ್ರಜ್ಞಾವಂತ ಸಂಸದರನ್ನು ಅವರು ಸಂಸತ್ತಿಗೆ ಕಳುಹಿಸಿದ್ದಾರೆ’ ಎಂದರು.

ಇಂಡಿಯಾ ಮೈತ್ರಿಕೂಟ ಕೆಲಸ ಮಾಡುತ್ತಿರುವ ಬಗೆಯ ಕುರಿತು ಶುಕ್ರವಾರ ಅಸಮಾಧಾನ ವ್ಯಕ್ತಪಡಿಸಿರುವ ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯ ಹೊಣೆ ಹಾಗೂ ಇಂಡಿಯಾ ಮೈತ್ರಿಕೂಟವನ್ನು ಮುನ್ನಡೆಸುವ ಹೊಣೆಯನ್ನು ತಾವು ಏಕಕಾಲದಲ್ಲಿ ನಿರ್ವಹಿಸಲು ಸಾಧ್ಯವಿದೆ’ ಎಂದು ಹೇಳಿದ್ದರು.

ಲೋಕಸಭಾ ಚುನಾವಣೆಯಲ್ಲಿ ಒಳ್ಳೆಯ ಸಾಧನೆ ತೋರಿದ್ದ ಕಾಂಗ್ರೆಸ್ ಪಕ್ಷವು ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಮುಗ್ಗರಿಸಿದೆ. ಇದರ ಬೆನ್ನಲ್ಲೇ ಮಮತಾ ಬ್ಯಾನರ್ಜಿ ಅವರು ಈ ಹೇಳಿಕೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.