ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೂನ್ 12ರ ಪ್ರತಿಪಕ್ಷಗಳ ಸಭೆಯಲ್ಲಿ ದೀದಿ ಭಾಗಿ ನಿರೀಕ್ಷೆ

Published 29 ಮೇ 2023, 15:02 IST
Last Updated 29 ಮೇ 2023, 15:02 IST
ಅಕ್ಷರ ಗಾತ್ರ

ಕೋಲ್ಕತ್ತ : ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ವಿರುದ್ಧ ಒಗ್ಗೂಡುವ ಸಂಬಂಧ ಬಿಹಾರದ ಪಟ್ನಾದಲ್ಲಿ ಜೂನ್‌ 12ರಂದು ನಡೆಯಲಿರುವ ಪ್ರತಿಪಕ್ಷಗಳ ಸಭೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಬಿಜೆಪಿ ವಿರುದ್ಧ ಪ್ರತಿಪಕ್ಷಗಳನ್ನು ಒಂದೇ ವೇದಿಕೆಯಡಿ ತರಲು ಮುಂದಾಗಿದ್ದಾರೆ. ಇದರ ಭಾಗವಾಗಿಯೇ ಅವರ ಉಸ್ತುವಾರಿಯಲ್ಲಿ ಪಟ್ನಾದಲ್ಲಿ ಸಭೆ ನಿಗದಿಯಾಗಿದೆ.

‘ಮಮತಾ ಅವರು ಸಭೆಯಲ್ಲಿ ಭಾಗವಹಿಸಿ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಎದುರಿಸಲು ಅಗತ್ಯವಿರುವ ವಿರೋಧ ಪಕ್ಷಗಳ ಒಗ್ಗಟ್ಟು ಮತ್ತು ಅದನ್ನು ಬಲಪಡಿಸುವ ಬಗ್ಗೆ ತಮ್ಮ ಸಲಹೆ ನೀಡಲಿದ್ದಾರೆ’ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಟಿಎಂಸಿ ಮುಖಂಡರೊಬ್ಬರು ತಿಳಿಸಿದ್ದಾರೆ.

ಕಳೆದ ತಿಂಗಳು ನಿತೀಶ್‌ ಕುಮಾರ್‌ ಕೋಲ್ಕತ್ತದಲ್ಲಿ ಮಮತಾ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದರು. ಈ ವೇಳೆ ಜಯಪ್ರಕಾಶ್‌ ನಾರಾಯಣ ಅವರ ಹೋರಾಟವನ್ನು ಸ್ಮರಿಸಿದ್ದ ದೀದಿ, ಪ್ರತಿಪಕ್ಷಗಳ ಸಭೆ ಆಯೋಜನೆಗೆ ಸಲಹೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT