ಪಟ್ನಾ: ಸಂಸತ್ತಿನ ಉಭಯ ಸದನಗಳಲ್ಲಿ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಬೆಂಬಲಿಸಿದ್ದಕ್ಕಾಗಿ ನಿತೀಶ್ ಕುಮಾರ್ ಅವರನ್ನು ಟೀಕಿಸಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಬಿಹಾರದ ಎನ್ಡಿಎ ಮಿತ್ರಪಕ್ಷಗಳ ನಾಯಕರು ಕಿಡಿಕಾರಿದ್ದಾರೆ.
.ಹಿಂಸೆಗೆ ಪ್ರಚೋದನೆ ನೀಡುತ್ತಿರುವ ಮಮತಾ: ಕೇಂದ್ರ ಸಚಿವ ಕಿರಣ್ ರಿಜಿಜು ಆರೋಪ.
ಬುಧವಾರ ಕೋಲ್ಕತ್ತದಲ್ಲಿ ಮುಸ್ಲಿಂ ಧಾರ್ಮಿಕ ನಾಯಕರೊಂದಿಗಿನ ಸಭೆಯನ್ನುದ್ದೇಶಿಸಿ ಮಾತನಾಡಿದ ಬ್ಯಾನರ್ಜಿ, ವಕ್ಫ್ ವಿಷಯದ ಬಗ್ಗೆ ಮೌನ ವಹಿಸಿದ್ದಕ್ಕಾಗಿ ಎನ್ಡಿಎಯ ಪ್ರಮುಖ ಮಿತ್ರಪಕ್ಷಗಳಾದ ನಿತೀಶ್ ಕುಮಾರ್ ಮತ್ತು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು.

‘ಈ ವಿಷಯದ ಬಗ್ಗೆ ನಿತೀಶ್ ಕುಮಾರ್ ಮತ್ತು ಚಂದ್ರಬಾಬು ನಾಯ್ಡು ಏಕೆ ಮೌನವಾಗಿದ್ದಾರೆ? ಅವರು ಎನ್ಡಿಎ ಪಾಲುದಾರರು. ಅವರು ಕೆಲವು ಅಧಿಕಾರವನ್ನು ಹಂಚಿಕೊಳ್ಳಲು ಮೌನವಾಗಿದ್ದರು’ ಎಂದು ಅವರು ಹೇಳಿದ್ದರು.
.ಪ.ಬಂಗಾಳ ಹೊತ್ತಿ ಉರಿಯುತ್ತಿದ್ದರೂ ಕ್ರಮಕೈಗೊಳ್ಳದ ಸಿಎಂ: ಮಮತಾ ವಿರುದ್ಧ ಯೋಗಿ.
ಬ್ಯಾನರ್ಜಿಯವರ ಹೇಳಿಕೆಗೆ ಪಟ್ನಾದಲ್ಲಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಗಿರಿರಾಜ್ ಸಿಂಗ್, ‘ಅವರು ಅಂತಹ ಹೇಳಿಕೆಗಳನ್ನು ನೀಡುವ ಮೂಲಕ ಪಶ್ಚಿಮ ಬಂಗಾಳವನ್ನು ಬಾಂಗ್ಲಾದೇಶವನ್ನಾಗಿ ಮಾಡಲು ಹೊರಟಿದ್ದಾರೆ. ನಿತೀಶ್ ಕುಮಾರ್ ವಿರುದ್ಧ ಅಂತಹ ಹೇಳಿಕೆಗಳನ್ನು ನೀಡುವ ಹಕ್ಕು ಅವರಿಗೆ ಇಲ್ಲ. ಅವರು ಮುರ್ಶಿದಾಬಾದ್ನಲ್ಲಿ ಹಿಂಸಾಚಾರವನ್ನು ನಿಯಂತ್ರಿಸುವಲ್ಲಿ ವಿಫಲರಾಗಿದ್ದಾರೆ. ಬಿಹಾರ ಎಂದಿಗೂ ಪಶ್ಚಿಮ ಬಂಗಾಳವಾಗುವುದಿಲ್ಲ’ ಎಂದು ಹೇಳಿದ್ದಾರೆ.
.ವಕ್ಫ್ (ತಿದ್ದುಪಡಿ) ಕಾಯ್ದೆ ಪಶ್ಚಿಮ ಬಂಗಾಳದಲ್ಲಿ ಜಾರಿಯಾಗುವುದಿಲ್ಲ: ಮಮತಾ.
‘ನಿತೀಶ್ ಕುಮಾರ್ ಅವರಿಗೆ ಬ್ಯಾನರ್ಜಿಯವರ ಸಲಹೆ ಅಗತ್ಯವಿಲ್ಲ. ಪಶ್ಚಿಮ ಬಂಗಾಳದ ಪರಿಸ್ಥಿತಿ ಗಂಭೀರ ಹಾಗೂ ಕಳವಳಕಾರಿಯಾಗಿದ್ದು, ನಿಯಂತ್ರಣ ತಪ್ಪಿದೆ. ಬಿಹಾರದಲ್ಲಿ ಸಂಪೂರ್ಣ ಶಾಂತಿ ಇದೆ. 20 ವರ್ಷಗಳಲ್ಲಿ ಬಿಹಾರದಲ್ಲಿ ಯಾವುದೇ ಗಲಭೆಗಳು ನಡೆದಿಲ್ಲ. ಅವರು ತಮ್ಮ ಸ್ವಂತ ರಾಜ್ಯದ ಬಗ್ಗೆ ಕಾಳಜಿ ವಹಿಸಲಿ’ ಎಂದು ಜೆಡಿಯು ರಾಷ್ಟ್ರೀಯ ವಕ್ತಾರ ರಾಜೀವ್ ರಂಜನ್ ಪ್ರಸಾದ್ ಹೇಳಿದ್ದಾರೆ.
.ಬಂಗಾಳದಲ್ಲಿ ಅಲ್ಪಸಂಖ್ಯಾತರು, ಅವರ ಆಸ್ತಿಗಳ ರಕ್ಷಣೆ; ಮಮತಾ ಬ್ಯಾನರ್ಜಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.