ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಗ್ರರು ಮುಂಬೈಗೆ ಬಂದಿರುವುದಾಗಿ ಹುಸಿ ಕರೆ: ಬಂಧನ

Published 27 ನವೆಂಬರ್ 2023, 13:57 IST
Last Updated 27 ನವೆಂಬರ್ 2023, 13:57 IST
ಅಕ್ಷರ ಗಾತ್ರ

ಮುಂಬೈ: 26/11ರ ಭಯೋತ್ಪಾದಕರ ದಾಳಿಯ 15ನೇ ವರ್ಷಾಚರಣೆ ದಿನವಾದ ಭಾನುವಾರ ಮೂವರು ಉಗ್ರರು ನಗರವನ್ನು ಪ್ರವೇಶಿಸಿದ್ದಾರೆ ಎಂದು ಮುಂಬೈ ಪೊಲೀಸರಿಗೆ ಹುಸಿ ಕರೆ ಮಾಡಿದ್ದ 31 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಆರೋಪಿ ಲಕ್ಷ್ಮಣ ನಾನಾವರೆ, ಕುಡಿದ ಮತ್ತಿನಲ್ಲಿ ಭಾನುವಾರ ಬೆಳಿಗ್ಗೆ 10 ಗಂಟೆಗೆ ಈ ರೀತಿ ಕರೆ ಮಾಡಿದ್ದ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

‘ಮುಂಬೈ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿದ್ದ ಆರೋಪಿಯು, ಇಬ್ಬರಿಂದ ಮೂವರು ಭಯೋತ್ಪಾದಕರು ಮುಂಬೈ ನಗರವನ್ನು ಪ್ರವೇಶಿಸಿದ್ದಾರೆ ಎಂದು ತಿಳಿಸಿದ್ದ. ಇದರಿಂದಾಗಿ ನಾವು ತಕ್ಷಣವೇ ಕಾರ್ಯಾಚರಣೆಗೆ ಮುಂದಾದೆವು. ಆದರೆ, ಇದು ಸುಳ್ಳು ಎಂಬುದು ಗೊತ್ತಾಯಿತು. ಆ ಬಳಿಕ ಕರೆ ಮಾಡಿದ್ದ ವ್ಯಕ್ತಿ ಇರುವ ಸ್ಥಳವನ್ನು ಪತ್ತೆ ಹಚ್ಚಿ, ಮನಖುದ್‌ ಉಪನಗರದಲ್ಲಿ ಆರೋಪಿಯನ್ನು ಭಾನುವಾರ ಸಂಜೆಯೇ ಬಂಧಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT