ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಠಾಣೆ: 2 ವರ್ಷದ ಮಗುವಿಗೆ 35 ವರ್ಷದ ವ್ಯಕ್ತಿಯಿಂದ ಲೈಂಗಿಕ ಕಿರುಕುಳ

Published : 31 ಆಗಸ್ಟ್ 2024, 15:39 IST
Last Updated : 31 ಆಗಸ್ಟ್ 2024, 15:39 IST
ಫಾಲೋ ಮಾಡಿ
Comments

ಠಾಣೆ: 35 ವರ್ಷದ ವ್ಯಕ್ತಿಯೊಬ್ಬ ತನ್ನ ನೆರೆ ಮನೆಯಲ್ಲಿದ್ದ ಎರಡು ವರ್ಷದ ಹೆಣ್ಣು ಮಗುವನ್ನು ಅಪಹರಿಸಿ, ಮಗುವಿಗೆ ಲೈಂಗಿಕ ಕಿರುಕುಳ ನೀಡಿರುವ ಹೇಯ ಘಟನೆ ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಕಲ್ಯಾಣದಲ್ಲಿ ನಡೆದಿದೆ. ಶುಕ್ರವಾರ ಈ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಿರುವುದಾಗಿ ಕಲ್ಯಾಣ ತಾಲ್ಲೂಕು ಪೊಲೀಸರು ತಿಳಿಸಿದ್ದಾರೆ. 

ಮಗುವನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಆರೋಪಿ, ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ. ನಂತರ ಏನಾಯಿತು ಎಂಬುದರ ಕುರಿತು ಮಗು, ತನ್ನದೇ ಮಾತಿನಲ್ಲಿ ಪೋಷಕರಿಗೆ ತಿಳಿಸಿದೆ. ಬಳಿಕ ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT