ಆರೋಪಿಯು ಚಲಿಸುತ್ತಿದ್ದ ರೈಲಿನಲ್ಲಿಯೇ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ವೇಳೆ ಆಕೆ ಅವನಿಗೆ ಕಪಾಳಮೋಕ್ಷ ಮಾಡಿದ್ದಾಳೆ. ಜತೆಗೆ, ಎಚ್ಚರಿಕೆಯನ್ನೂ ನೀಡಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಭಾನುವಾರ ಕರ್ಜಾತ್–ಪುಣೆ ನಡುವೆ ಚೆನ್ನೈ ಎಕ್ಸ್‌ಪ್ರೆಸ್ ರೈಲು ಚಲಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಈ ಘಟನೆ ಸಂಬಂಧ ರೈಲು ಸಿಬ್ಬಂದಿಯು ಮಾಹಿತಿ ನೀಡಿದ ಕೂಡಲೇ ಆರೋಪಿಯನ್ನು ಬಂಧಿಸಲಾಗಿದೆ. ಸದ್ಯ ಆರೋಪಿಯನ್ನು14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.