ಮುಜಫರ್ನಗರ (ಉತ್ತರ ಪ್ರದೇಶ): ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ಒಳಗೊಂಡಿದೆ ಎನ್ನಲಾದ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ 22 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಜಿತೇಂದ್ರ ಕುಮಾರ್ ಕಶ್ಯಪ್ ಬಂಧಿತ ಆರೋಪಿ.

ಕಶ್ಯಪ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 352 ಮತ್ತು 353ರ (ಶಾಂತಿ ಭಂಗ ಮಾಡುವ ಉದ್ದೇಶದಿಂದ ಉದ್ದೇಶಪೂರ್ವಕ ಕೃತ್ಯ) ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದು ಚಾರ್ತಾವಲ್ ಪೊಲೀಸ್ ಠಾಣೆಯ ಎಸ್ಎಚ್ಒ (SHO) ಸತ್ಯನಾರಾಯಣ ದಹಿಯಾ ಅವರು ಮಾಹಿತಿ ನೀಡಿದ್ದಾರೆ.

ಪ್ರಧಾನಿ ಕುರಿತಾದ ಈ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು . ಶನಿವಾರ ಸಂಜೆ ಆತನನ್ನು ಬಂಧಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.