ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕುದುರೆ ಸವಾರಿ ಅಕಾಡೆಮಿಯಲ್ಲಿ ಕುದುರೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಮೇ 17ರಂದು ನಾಗ್ಪುರದ ಗಿಟ್ಟಿಖಾದನ್ ಪ್ರದೇಶದ ಕುದುರೆ ಸವಾರಿ ಅಕಾಡೆಮಿಯಲ್ಲಿ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆ ಸಂಬಂಧ ಕುದುರೆ ಅಕಾಡೆಮಿಯ ಮಾಲೀಕರು ದೂರು ನೀಡಿದ್ದರು. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿ ಚೋಟ್ಯಾ ಸುಂದರ್ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ರಾತ್ರಿ ವೇಳೆ ಅಕ್ರಮವಾಗಿ ಅಕಾಡೆಮಿ ಪ್ರವೇಶಿಸಿದ ಆರೋಪಿ ಕುದುರೆಯೊಂದರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ದೃಢಪಟ್ಟಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆ ಸಂಬಂಧ ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.