ಕೋಟಾ (ರಾಜಸ್ಥಾನ): ಬುಂಡಿಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಿಗೆ ಕೊಲೆ ಬೆದರಿಕೆ ಪತ್ರ ಬರೆದಿದ್ದ ಆರೋಪದ ಮೇಲೆ 50 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ತ್ರಿಲೋಕಚಂದ್ ಶರ್ಮಾ ಬಂಧಿತ ಆರೋಪಿ. ಆತನ ವಿರುದ್ಧ ‘ನೆಗೋಷಿಯಬಲ್ ಇನ್‌ಸ್ಟ್ರುಮೆಂಟ್ ಕಾಯ್ದೆ’ಯ ಅಡಿ ಪ್ರಕರಣ ದಾಖಲಾಗಿ, ವಿಚಾರಣೆ ನಡೆಯುತ್ತಿತ್ತು. ಆದೇಶ ತನ್ನ ವಿರುದ್ಧ ಬರಬಹುದು ಎಂಬ ಭಯದಲ್ಲಿ ಆತ ನ್ಯಾಯಾಧೀಶರಿಗೆ ಅನಾಮಧೇಯ ಪತ್ರ ಬರೆದಿದ್ದ. ಪತ್ರದಲ್ಲಿ ನ್ಯಾಯಾಧೀಶರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ.

ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾದ ದೃಶ್ಯಗಳು ಹಾಗೂ ಇತರ ಪುರಾವೆಗಳ ಆಧಾರದ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಬುಂಡಿ ನಗರ ಠಾಣೆಯ ಸರ್ಕಲ್ ಇನ್‌ಸ್ಪೆಕ್ಟರ್ ಸಹದೇವ್ ಮೀನಾ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.