ಜೈಪುರ: ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಪರವಾಗಿ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ರಾಜಸ್ಥಾನದ ಅಲ್ವಾರ್ ಜಿಲ್ಲೆಯ ವ್ಯಕ್ತಿಯನ್ನು ಶುಕ್ರವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗತ್ ಸಿಂಗ್ ಬಂಧಿತ ಆರೋಪಿ. ಶನಿವಾರ ಆತನನ್ನು ಜೈಪುರದ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಲ್ವಾರ್ನ ಗೋವಿಂದಗಢ ನಿವಾಸಿಯಾದ ಸಿಂಗ್, ಪಾಕಿಸ್ತಾನದ ಮಹಿಳಾ ಹ್ಯಾಂಡ್ಲರ್ ಜತೆ ಕಳೆದ ಎರಡು ವರ್ಷಗಳಿಂದ ಸಂಪರ್ಕಹೊಂದಿದ್ದ ಮತ್ತು ಭಾರತೀಯ ಸೇನೆಯ ಚಲನವಲನಗಳಿಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಕಳುಹಿಸುತ್ತಿದ್ದ ಎಂದು ಅವರು ತಿಳಿಸಿದ್ದಾರೆ.

ಹ್ಯಾಂಡ್ಲರ್ ನಂಬರ್ ಅನ್ನು 'ಇಶಾ ಶರ್ಮಾ' ಮತ್ತು 'ಇಶಾ ಬಾಸ್' ಎಂಬ ಹೆಸರಿನಲ್ಲಿ ಸೇವ್ ಮಾಡಿಕೊಂಡಿದ್ದ. ಸೇನೆ ಮತ್ತು ಬಿಎಸ್ಎಫ್ ಚಲನವಲನಗಳಿಗೆ ಸಂಬಂಧಿಸಿದ ಹಲವು ಫೋಟೊ ಮತ್ತು ವಿಡಿಯೊಗಳನ್ನು ಹಂಚಿಕೊಂಡಿದ್ದ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಹೇಳಿದ್ದಾರೆ.

ಮೂಲಗಳ ಪ್ರಕಾರ, ಮಾಹಿತಿ ನೀಡಿದ್ದಕ್ಕಾಗಿ ಆತ ಪಾಕಿಸ್ತಾನದಿಂದ ₹10,000 ಪಡೆದಿದ್ದಾನೆ ಎಂದು ಆರೋಪಿಸಲಾಗಿದೆ. ಆತನ ಮೊಬೈಲ್ ಫೋನ್ನಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಗೂ ಮೊದಲು ಸೈನ್ಯದ ಚಲನವಲನಗಳ ಬಗ್ಗೆ ಸುಳಿವು ನೀಡುವ ಕೋಡೆಡ್ ಸಂದೇಶಗಳು ಸೇರಿದಂತೆ ಸೂಕ್ಷ್ಮ ವಿಚಾರ ವಿನಿಮಯಗಳ ದಾಖಲೆಗಳಿವೆ ಎಂದೂ ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.