ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪತ್ನಿಗೆ ತ್ರಿವಳಿ ತಲಾಖ್‌: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವೈದ್ಯ ಬಂಧನ

Last Updated 13 ಫೆಬ್ರುವರಿ 2023, 5:03 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ‘ಪತ್ನಿಗೆ ತ್ರಿವಳಿ ತಲಾಖ್‌ ನೀಡಿದ್ದ ನಗರದ ವೈದ್ಯರೊಬ್ಬರನ್ನು ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ’ ಎಂದು ದೆಹಲಿ ಪೊಲೀಸರು ಭಾನುವಾರ ಹೇಳಿದ್ದಾರೆ.

‘ಆರೋಪಿ ಬೆಂಗಳೂರು ವಿಮಾನ ನಿಲ್ದಾಣದ ಮೂಲಕ ಇಂಗ್ಲೆಂಡ್‌ಗೆ ಪ್ರಯಾಣ ಬೆಳೆಸಲು ಸಜ್ಜಾಗಿದ್ದರು. ಈ ವೇಳೆ ಅವರನ್ನು ಬಂಧಿಸಲಾಗಿದೆ. 2022ರ ಅಕ್ಟೋಬರ್‌ 13ರಂದು ಘಟನೆ ನಡೆದಿತ್ತು.

ಈ ಕುರಿತು ಮಹಿಳೆಯು ಈ ತಿಂಗಳ ಆರಂಭದಲ್ಲಿ ದೆಹಲಿಯ ಕಲ್ಯಾಣ್‌ಪುರಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಆರೋಪಿಯು ಬೆಂಗಳೂರಿನಲ್ಲಿ ಇರುವುದು ತನಿಖೆಯಿಂದ ಗೊತ್ತಾಗಿತ್ತು. ಹೀಗಾಗಿ ಪೊಲೀಸರ ತಂಡವೊಂದನ್ನು ಬೆಂಗಳೂರಿಗೆ ಕಳುಹಿಸಲಾಗಿತ್ತು. ಅವರು ಇದೇ 9ರಂದು ಆರೋಪಿಯನ್ನು ಬಂಧಿಸಿ ನಗರಕ್ಕೆ ಕರೆತಂದಿದ್ದರು’ ಎಂದು ಮಾಹಿತಿ ನೀಡಿದ್ದಾರೆ.

‘2018ರಲ್ಲಿ ಮಹಿಳೆಗೆ ಆರೋಪಿಯ ಪರಿಚಯವಾಗಿತ್ತು. ಇಬ್ಬರೂ 2020ರಲ್ಲಿ ವಿವಾಹವಾಗಿದ್ದರು. ದಂಪತಿಗೆ ಮಕ್ಕಳಾಗಿರಲಿಲ್ಲ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT