ಶುಕ್ರವಾರ, 21 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೇಜ್ರಿವಾಲ್‌ಗೆ ಬೆದರಿಕೆ ಬರಹ: ಸಿ.ಸಿ.ಟಿ.ವಿಯಿಂದ ಯುವಕನ ಸುಳಿವು

Published 21 ಮೇ 2024, 23:30 IST
Last Updated 21 ಮೇ 2024, 23:30 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಬೆದರಿಕೆ ಹಾಕುವಂತಹ ಗೀಚುಬರಹಗಳನ್ನು ಮೆಟ್ರೊ ರೈಲುಗಳಲ್ಲಿ ಯುವಕನೊಬ್ಬ ಬರೆಯುತ್ತಿರುವುದು ಸಿ.ಸಿ.ಟಿ.ವಿ. ವಿಡಿಯೊದಿಂದ ತಿಳಿದುಬಂದಿದೆ ಎಂದು ದೆಹಲಿ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

‘ಮೆಟ್ರೊ ರೈಲುಗಳ ಕೋಚ್‌ಗಳು ಹಾಗೂ ಸೈನ್‌ಬೋರ್ಡ್‌ಗಳಲ್ಲಿ ಗೀಚುತ್ತಿದ್ದ ಯುವಕನ ದೃಶ್ಯಗಳು ಸಿ.ಸಿ.ಟಿ.ವಿ ವಿಡಿಯೊದಲ್ಲಿ ಕಂಡಿವೆ. ಅಂಕಿತ್ತ ಗೋಯೆಲ್ ಎಂಬ ಯುವಕನು ತನ್ನ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಗೀಚುಬರಹಗಳ ಫೋಟೊಗಳನ್ನು ಹಂಚಿಕೊಂಡಿದ್ದ. ಅವನೇ ಗೀಚುಬರಹ ಬರೆದಿಬಹುದೆಂದು ಶಂಕಿಸಲಾಗಿದೆ. ಅವನನ್ನು ಪತ್ತೆಹಚ್ಚುವ ಕಾರ್ಯ ನಡೆದಿದೆ’ ಎಂದು ಪೊಲೀಸರು ಹೇಳಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT