ಬುಧವಾರ, 6 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುಲ್ವಾಮಾದಲ್ಲಿ ಭಯೋತ್ಪಾದಕರಿಂದ ಗುಂಡಿನ ದಾಳಿ: ಕಾಶ್ಮೀರಿ ಪಂಡಿತನ ಹತ್ಯೆ

Last Updated 26 ಫೆಬ್ರವರಿ 2023, 6:39 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭಾನುವಾರ ಭಯೋತ್ಪಾದಕರು ಕಾಶ್ಮೀರಿ ಪಂಡಿತ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಮೃತರನ್ನು ಸಂಜಯ್‌ ಶರ್ಮಾ (40) ಎಂದು ಗುರುತಿಸಲಾಗಿದೆ. ಬೆಳಗ್ಗೆ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ಇಲ್ಲಿನ ಮಾರುಕಟ್ಟೆಗೆ ತೆರಳುತ್ತಿದ್ದಾಗ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಬದುಕುಳಿಯಲಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆ ನಡೆದಿರುವ ಪ್ರದೇಶವನ್ನು ಪೊಲೀಸರು ಹಾಗೂ ಭದ್ರತಾ ಪಡೆಗಳು ಸುತ್ತುವರೆದಿದ್ದು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಪೊಲೀಸ್‌ ಅಧಿಕಾರಿಗಳು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT