ಆರೋಪಿಯು ಬೀದಿ ನಾಯಿಯನ್ನು ಕ್ರಿಕೆಟ್ ಬ್ಯಾಟ್‌ನಿಂದ ಹೊಡೆದು, ತೀವ್ರವಾಗಿ ಗಾಯಗೊಳಿಸಿದ್ದಾನೆ. ಚಿಕಿತ್ಸೆ ಕೊಡಿಸಿದಾದರೂ ನಾಯಿ ಬದುಕುಳಿಯಲಿಲ್ಲ ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆಯ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಸೆಕ್ಷನ್ 325 ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.