ಠಾಣೆ: ಒಬ್ಬಳೇ ವಾಕಿಂಗ್ ಹೋಗಿದ್ದಕ್ಕೆ ಪತ್ನಿಗೆ ತ್ರಿವಳಿ ತಲಾಖ್ ನೀಡಿದ ಆರೋಪದ ಮೇಲೆ 31 ವರ್ಷದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಠಾಣೆ ಪೊಲೀಸರು ತಿಳಿಸಿದ್ದಾರೆ.

ಠಾಣೆ ಜಿಲ್ಲೆಯ ಮುಂಬ್ರಾ ಪ್ರದೇಶದ ನಿವಾಸಿಯಾಗಿರುವ ಆರೋಪಿಯು ಮಂಗಳವಾರ ತನ್ನ ಪತ್ನಿಯ ತಂದೆಗೆ ಕರೆ ಮಾಡಿ ತ್ರಿವಳಿ ತಲಾಖ್ ಮೂಲಕ ತನ್ನ ವಿವಾಹವನ್ನು ರದ್ದುಗೊಳಿಸುವುದಾಗಿ ಹೇಳಿದ್ದಾನೆ.

ಈ ಸಂಬಂಧ ಪತ್ನಿ ದೂರು ನೀಡಿದ್ದು, ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 351 (4)ರ ಅಡಿಯಲ್ಲಿ (ಉದ್ದೇಶ ಪೂರ್ವಕ ಬೆದರಿಕೆ) ಮತ್ತು ಮುಸ್ಲಿಂ ಮಹಿಳೆಯರ (ವಿವಾಹ ಹಕ್ಕುಗಳ ರಕ್ಷಣೆ) ಕಾಯ್ದೆಯಡಿ ಎಫ್ಐಆರ್ ದಾಖಲಾಗಿದೆ.

ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಸ್ಲಿಂ ಮಹಿಳೆ (ವೈವಾಹಿಕ ಹಕ್ಕುಗಳು) ಮಸೂದೆ–2019ರ ಅನ್ವಯ ತ್ರಿವಳಿ ತಲಾಖ್ ನೀಡುವುದು ಅಪರಾಧ.

ಮಸೂದೆಯ ಪ್ರಮುಖಾಂಶಗಳು

ತ್ರಿವಳಿ ತಲಾಖ್ ನೀಡಿದ ಸಂಬಂಧ ಸಂತ್ರಸ್ತ ಮಹಿಳೆ ಅಥವಾ ಆಕೆಯ ರಕ್ತಸಂಬಂಧಿಗಳು ದೂರು ನೀಡಿದರೆ ಮಾತ್ರ ಪ್ರಕರಣ ಮಾನ್ಯವಾಗುತ್ತದೆ.

ತ್ರಿವಳಿ ತಲಾಖ್ ನೀಡುವ ಪುರುಷನಿಗೆ ಮೂರು ವರ್ಷ ಜೈಲು ಶಿಕ್ಷೆ. ಆ ಪುರುಷನಿಗೆ ಜಾಮೀನು ಕೊಡಬಹುದು. ಆದರೆ ಸಂತ್ರಸ್ತ ಮಹಿಳೆಯ ಜತೆ ಸಮಾಲೋಚನೆ ನಡೆಸಿದ ನಂತರವಷ್ಟೇ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಬಹುದು.

ಸಂತ್ರಸ್ತ ಮಹಿಳೆಯು ಪರಿಹಾರ ಪಡೆಯಲು ಅರ್ಹರಾಗಿರುತ್ತಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.