ಶುಕ್ರವಾರ, 13 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಫ್ಲ್ಯಾಟ್ ಗೋಡೆಯಲ್ಲಿ ಪಾಕಿಸ್ತಾನ ಪರ ಬರಹ: ದೆಹಲಿಯಲ್ಲಿ ವ್ಯಕ್ತಿಯ ಬಂಧನ

Published 5 ಆಗಸ್ಟ್ 2024, 3:23 IST
Last Updated 5 ಆಗಸ್ಟ್ 2024, 3:23 IST
ಅಕ್ಷರ ಗಾತ್ರ

ನವದೆಹಲಿ: ಫ್ಲ್ಯಾಟ್‌ನ ಗೋಡೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಬರೆದ ವ್ಯಕ್ತಿಯನ್ನು ದೆಹಲಿ ರೋಹಿಣಿ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

‘ರೋಹಿಣಿಯ ಅವಂತಿಕ– ಸಿ ಬ್ಲಾಕ್‌ನ ನಿವಾಸಿ ತನ್ನ ಫ್ಲ್ಯಾಟ್‌ ಗೋಡೆಯಲ್ಲಿ ವ್ಯಕ್ತಿಯೊಬ್ಬ ಪಾಕಿಸ್ತಾನ ಪರ ಘೋಷಣೆ ಬರೆದಿದ್ದಾನೆ ಎನ್ನುವ ಮಾಹಿತಿ ಬಂತು. ಪ್ರಾಥಮಿಕ ಮಾಹಿತಿ ಪ್ರಕಾರ ಆತ ಮಾನಸಿಕ ಅಸ್ವಸ್ಥನಾಗಿದ್ದು, ಏಕಾಂಗಿಯಾಗಿ ವಾಸವಿದ್ದ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಾಕಿಸ್ತಾನ ಅಥವಾ ಇನ್ಯಾವುದೇ ಸಂಘಟನೆ ಜೊತೆಗೆ ವ್ಯಕ್ತಿಗೆ ಸಂಬಂಧ ಇದೆಯೇ ಎನ್ನುವುದರ ಬಗ್ಗೆ ನಾವು ತನಿಖೆ ನಡೆಸಲಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

ವ್ಯಕ್ತಿಯ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸಲು ಆತನ ಕುಟುಂಬದ ಸದಸ್ಯರನ್ನು ಸಂಪರ್ಕಿಸಲಾಗಿದೆ. ಅವರ ಕೋಣೆಯಿಂದ ಆಕ್ಷೇಪಾರ್ಹ ಪೋಸ್ಟರ್‌ಗಳು ಮತ್ತು ಬ್ಯಾನರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಫ್ಲ್ಯಾಟ್‌ನ ಗೋಡೆಯಲ್ಲಿ ಇರುವ ಆಕ್ಷೇಪಾರ್ಹ ಬರಹಗಳ ವಿಡಿಯೊವನ್ನು ಸ್ಥಳೀಯರು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT