ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಬರುವ ವೇಳೆ ಅಪಘಾತ: ಕಾನ್‌ಸ್ಟೆಬಲ್‌ ಸಾವು

ಪರಸ್ಪರ ಕಿತ್ತಾಡಿಕೊಂಡು ಗಾಯಗೊಂಡಿದ್ದ ವಿದ್ಯಾರ್ಥಿಯೂ ನಿಧನ
Last Updated 8 ಮೇ 2022, 10:33 IST
ಅಕ್ಷರ ಗಾತ್ರ

ಬಾರಬಂಕಿ (ಉತ್ತರ ಪ್ರದೇಶ): ಪರಸ್ಪರ ಕಿತ್ತಾಡಿಕೊಂಡು ತೀವ್ರ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ವಾಪಸ್‌ ಬರುವ ವೇಳೆ ಪೊಲೀಸ್‌ ಕಾನ್‌ಸ್ಟೆಬಲ್‌ವೊಬ್ಬರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಬಾರಬಂಕಿಯಲ್ಲಿ ಶನಿವಾರ ತಡರಾತ್ರಿ ನಡೆದಿದೆ.

ಬೀಡಾಡಿ ದನಗಳಿಗೆ ಬೈಕ್‌ ಗುದ್ದಿದ ಪರಿಣಾಮಕಾನ್‌ಸ್ಟೆಬಲ್‌ ಸಾವಿಗೀಡಾಗಿದ್ದಾರೆ. ರಾಜ್‌ ಕುಮಾರ್‌ ಪಾಂಡೆ ಮೃತ ದುರ್ದೈವಿ ಎಂದು ಭಾನುವಾರ ಅಧಿಕಾರಿಗಳು ತಿಳಿಸಿದ್ದಾರೆ.

ಶನಿವಾರ ತಡರಾತ್ರಿ ಇಲ್ಲಿನ ಹೋಟೆಲ್‌ ಹೊರಭಾಗದಲ್ಲಿ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳ ಎರಡು ಗುಂಪು ಪರಿಸ್ಪರ ಹೊಡೆದಾಟ ನಡೆಸಿದ್ದರು. ಈ ವೇಳೆ ಸುಯಾಶ್‌ (25) ಮತ್ತು ಅಲೋಕ್‌ (26) ಎಂಬವರು ಗಾಯಗೊಂಡಿದ್ದರು.ಕಾನ್‌ಸ್ಟೆಬಲ್‌ ರಾಜ್‌ ಕುಮಾರ್‌ ಪಾಂಡೆ ಮತ್ತು ಜಯಶ್‌ ರಾಮ್‌ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸುಯಾಶ್‌ ಮೃತಪಟ್ಟಿದ್ದಾನೆ.

ಈ ಮಧ್ಯೆ ಆಸ್ಪತ್ರೆಯಿಂದ ವಾಪಸ್‌ ಬರುವ ವೇಳೆ ದ್ವಿಚಕ್ರ ವಾಹನವು ಬೀಡಾಡಿ ದನಗಳಿಗೆ ಗುದ್ದಿದ ಪರಿಣಾಮ ಇಬ್ಬರು ಕಾನ್‌ಸ್ಟೆಬಲ್‌ಗಳು ತೀವ್ರವಾಗಿ ಗಾಯಗೊಂಡಿದ್ದರು. ಇವರನ್ನು ಲಖನೌನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಕಾನ್‌ಸ್ಟೆಬಲ್ ಪಾಂಡೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಪೂರ್ಣೇಂದು ಸಿಂಗ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT