ಜೈಪುರ: ಬ್ಲೂಟೂತ್ ಹೆಡ್‌ಫೋನ್ ಸ್ಪೋಟಗೊಂಡ ಪರಿಣಾಮ 28 ವರ್ಷದ ಯುವಕನೊಬ್ಬ ಮೃತಪಟ್ಟಿರುವ ಘಟನೆ ಇಲ್ಲಿನ ಉದಯಪುರಿಯ ಗ್ರಾಮದಲ್ಲಿ ನಡೆದಿದೆ.

ಶುಕ್ರವಾರ ರಾಕೇಶ್ ಕುಮಾರ್ ನಗರ ಎಂಬಾತ ತನ್ನ ನಿವಾಸದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದರು.

‘ರಾಕೇಶ್ ಕುಮಾರ್ ಹೆಡ್‌ಫೋನ್ ಚಾರ್ಜ್‌ಗಿಟ್ಟು ಅದನ್ನು ಬಳಕೆ ಮಾಡುತ್ತಿದ್ದಾಗ ಹೆಡ್‌ಫೋನ್ ಸ್ಪೋಟಗೊಂಡಿದೆ. ಈ ವೇಳೆ ಪ್ರಜ್ಞೆ ತಪ್ಪಿದ್ದ ರಾಕೇಶ್ ಅವರನ್ನು ಸಿದ್ಧಿ ವಿನಾಯಕ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ರಾಕೇಶ್ ಮೃತಪಟ್ಟಿದ್ದಾರೆ. ಸ್ಫೋಟದಿಂದಾಗಿ ಅವರ ಕಿವಿಗೆ ಗಂಭೀರ ಗಾಯಗಳಾಗಿತ್ತು’ ಎಂದು ಅವರು ಮಾಹಿತಿ ನೀಡಿದರು.

‘ರಾಕೇಶ್ ಬಹುಶಃ ಹೃದಯಾಘಾತದಿಂದ ಸಾವಿಗೀಡಾಗಿರಬಹುದು’ ಎಂದು ಡಾ. ಎಲ್.ಎನ್. ರುಂದ್ಲಾ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.