ಕೋಲ್ಕತ್ತ: ಉತ್ತರ ಕೋಲ್ಕತ್ತದಲ್ಲಿರುವ ಸರ್ಕಾರಿ ಸ್ವಾಮ್ಯದ ಆರ್.ಜಿ.ಕರ್ ಆಸ್ಪತ್ರೆಯ ಲಿಫ್ಟ್ನಲ್ಲಿ ವ್ಯಕ್ತಿಯೊಬ್ಬರು ಸಿಕ್ಕಿಹಾಕಿಕೊಂಡು ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ.

‘ಇದು ಕೊಲೆ, ಘಟನೆಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೇ ಹೊಣೆ’ ಎಂದು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಆರೋಪಿಸಿದ್ದಾರೆ.

ಪುರ್ಬಾ ಮೇದಿನಿಪುರದ ಮಹಿಷಾದ್ನಲ್ಲಿ ಚುನಾವಣಾ ಪ್ರಚಾರದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸುವೇಂದು, ‘ರಾಜ್ಯದ ಆರೋಗ್ಯ ವ್ಯವಸ್ಥೆಯಲ್ಲಿರುವ ಭ್ರಷ್ಟಾಚಾರವೇ ಈ ಘಟನೆಗೆ ಕಾರಣ. ಆರೋಗ್ಯ ಇಲಾಖೆಯ ಉಸ್ತುವಾರಿಯೂ ಆಗಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಆರೋಗ್ಯ ಇಲಾಖೆ ಕಾರ್ಯದರ್ಶಿ ನಾರಾಯಣ್ ಸ್ವರೂಪ್ ನಿಗಮ್ ಮತ್ತು ಆಸ್ಪತ್ರೆಯ ಸೂಪರಿಂಟೆಂಡೆಂಟ್ ಈ ಸಾವಿಗೆ ಕಾರಣ’ ಎಂದು ಸುವೇಂದು ದೂರಿದ್ದಾರೆ.

‘ಆರ್.ಜಿ.ಕರ್ ವೈದ್ಯಕೀಯ ಕಾಲೇಜಿನಲ್ಲಿನ ಆ ಲಿಫ್ಟ್ ದುರಸ್ತಿ ಮಾಡಲಾಗುತ್ತಿತ್ತು. ಈ ವಿಷಯದಲ್ಲಿ ತಕ್ಷಣ ಕೊಲೆ ಪ್ರಕರಣ ದಾಖಲಿಸಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.