ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕುತ್ತಿಗೆಗೆ ಸುತ್ತಿಕೊಂಡ ಹೆಬ್ಬಾವು: ಉಸಿರುಗಟ್ಟಿ ವ್ಯಕ್ತಿ ಸಾವು

Published 29 ಆಗಸ್ಟ್ 2024, 13:56 IST
Last Updated 29 ಆಗಸ್ಟ್ 2024, 13:56 IST
ಅಕ್ಷರ ಗಾತ್ರ

ಜಮ್‌ಶೇಡ್‌ಪುರ : ಜಾರ್ಖಂಡ್‌ನ ಜಮ್‌ಶೇಡ್‌ಪುರದಲ್ಲಿ 60 ವರ್ಷದ ವ್ಯಕ್ತಿಯೊಬ್ಬರ ಕುತ್ತಿಗೆಗೆ ಹೆಬ್ಬಾವು ಸುತ್ತಿಕೊಂಡು ಉಸಿರುಗಟ್ಟಿ ಮೃತಪಟ್ಟ ಘಟನೆ ಗುರುವಾರ ನಡೆದಿದೆ.

ಕುತ್ತಿಗೆಗೆ ಹಾವು ಸುತ್ತಿಕೊಂಡು ಹಣ ಸಂಪಾದಿಸಲು ಯತ್ನಿಸುತ್ತಿದ್ದ ವೇಳೆ ಏಕಾಏಕಿ ಹಾವು ಗಂಟಲಿಗೆ ಬಿಗಿದಿದೆ. ಪರಿಣಾಮ ಆತನಿಗೆ ಉಸಿರಾಡಲು ಸಾಧ್ಯವಾಗದೆ ಮೃತಪಟ್ಟಿದ್ದಾನೆ. ವ್ಯಕ್ತಿ ಮೃತಪಡುತ್ತಿದ್ದಂತೆ ಹಾವು ಬಿಗಿ ಸಡಿಲಿಸಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿರುವುದಾಗಿ ವರದಿಯಾಗಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲಿಸರು, ತಜ್ಞರ ಸಹಾಯದಿಂದ ಹಾವನ್ನು ಹಿಡಿದು. ಬಳಿಕ ಅರಣ್ಯ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ಕಾಡಿಗೆ ಬಿಟ್ಟಿದ್ದಾರೆ.

ಮೃತಪಟ್ಟ ವ್ಯಕ್ತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT