ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಆ್ಯಪ್‌ ಮೂಲಕ ಸಾಲ: ನಾಲ್ವರ ಬಂಧನ

ಆ್ಯಪ್‌ ಮೂಲಕ ದಿಢೀರ್‌ ಸಾಲ ಪಾವತಿ
Last Updated 3 ಜನವರಿ 2021, 21:26 IST
ಅಕ್ಷರ ಗಾತ್ರ

ಚೆನ್ನೈ: ಆ್ಯಪ್‌ಗಳ ಮೂಲಕ ದಿಢೀರ್ ಸಾಲ ನೀಡುವ ವ್ಯವಹಾರ ನಡೆಸುತ್ತಿದ್ದ ಆರೋಪಕ್ಕೆ ಸಂಬಂಧಿಸಿ ಇಬ್ಬರು ಚೀನಿಯರು ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ತನಿಖೆಯ ಪ್ರಾಥಮಿಕ ಮಾಹಿತಿ ಪ್ರಕಾರ, ಮುಖ್ಯ ಆರೋಪಿ ಚೀನಾದಲ್ಲಿ ಉಳಿದುಕೊಂಡು ಈ ವಹಿವಾಟು ನಿರ್ವಹಣೆ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಇಬ್ಬರು ಭಾರತೀಯರು ಬೆಂಗಳೂರಿನಲ್ಲಿ ಕುಳಿತು ಕಾಲ್‌ಸೆಂಟರ್ ನಡೆಸುತ್ತಿದ್ದರು. ಕ್ಷಿಪ್ರವಾಗಿ ಆನ್‌ಲೈನ್‌ನಲ್ಲಿ ಸಾಲ ನೀಡಲು ಸುಮಾರು 100 ಜನರನ್ನು ಕೆಲಸಕ್ಕೆ ನೇಮಿಸಿಕೊಂಡಿದ್ದರು. ಪ್ರತಿ ಸಿಬ್ಬಂದಿ ವಾರಕ್ಕೆ ಕನಿಷ್ಠ 10 ಜನರಿಗೆ ಸಾಲ ನೀಡಬೇಕು. ಇಲ್ಲದಿದ್ದರೆ ಕೆಲಸದಿಂದ ತೆಗೆಯಲಾಗುವುದು ಎಂದು ಷರತ್ತು ವಿಧಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT