ಸೋಮವಾರ, 7 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮನೆಯಲ್ಲಿಯೇ ಗರ್ಭಪಾತ ಮಾಡಿಸಲು ಮುಂದಾದ ಗಂಡ: 4 ತಿಂಗಳ ಗರ್ಭಿಣಿ ಸಾವು

Published : 25 ಸೆಪ್ಟೆಂಬರ್ 2024, 3:19 IST
Last Updated : 25 ಸೆಪ್ಟೆಂಬರ್ 2024, 3:19 IST
ಫಾಲೋ ಮಾಡಿ
Comments

ಪುಣೆ: ಹೆಣ್ಣು ಭ್ರೂಣ ಎಂಬ ಕಾರಣದಿಂದ ತನ್ನ ನಾಲ್ಕು ತಿಂಗಳ ಗರ್ಭಿಣಿ ಪತ್ನಿಗೆ ಮನೆಯಲ್ಲಿಯೇ ಗರ್ಭಪಾತ ಮಾಡಿಸಲು ಪತಿ ಒತ್ತಾಯಿಸಿದ್ದಾನೆ. ಈ ವೇಳೆ ಮಹಿಳೆ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ಮಹಿಳೆ 2017ರಲ್ಲಿ ಆರೋಪಿಯನ್ನು ಮದುವೆಯಾಗಿದ್ದಳು. ಒಂದು ಹೆಣ್ಣು ಹಾಗೂ ಒಂದು ಗಂಡು ಮಗು ಇದ್ದು, ಮೂರನೇ ಮಗುವಿನ ನಿರೀಕ್ಷೆಯಲ್ಲಿದ್ದ ಮಹಿಳೆ ಸಾವಿಗೀಡಾಗಿದ್ದಾರೆ.

ಪತಿಯ ಮನೆಯವರಿಗೆ ಆಕೆಯ ಹೊಟ್ಟೆಯಲ್ಲಿ ಇರುವುದು ಹೆಣ್ಣು ಭ್ರೂಣವೆಂದು ತಿಳಿದು, ಮಹಿಳೆಗೆ ಮನೆಯಲ್ಲಿಯೇ ಗರ್ಭಪಾತ ಮಾಡಿಸಲು ವೈದ್ಯರನ್ನು ಕರೆಸಿದ್ದರು. ಭ್ರೂಣವನ್ನು ಜಮೀನಲ್ಲಿ ಹೂಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ಆರೋಪಿ ಪತಿ ಹಾಗೂ ಆತನ ತಂದೆ ಇಬ್ಬರನ್ನೂ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT