ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೈಕ್ ಪಾರ್ಕಿಂಗ್‌ ವಿಚಾರದಲ್ಲಿ ಗಲಾಟೆ: ತಮ್ಮನನ್ನು ಕೊಡಲಿಯಿಂದ ಕೊಚ್ಚಿ ಕೊಂದ ಅಣ್ಣ

Published 5 ಮೇ 2024, 9:49 IST
Last Updated 5 ಮೇ 2024, 9:49 IST
ಅಕ್ಷರ ಗಾತ್ರ

ಕೋಟಾ: ಬೈಕ್ ಪಾರ್ಕಿಂಗ್ ಸಂಬಂಧ ಉಂಟಾದ ಜಗಳದಲ್ಲಿ ಸಹೋದರನನ್ನೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಆರೋಪದಲ್ಲಿ 38 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ರಾಜಸ್ಥಾನದ ಕೋಟಾ ಜಿಲ್ಲೆಯ ಸುಕೇತ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಜಿಹ್ರಿ ಎನ್ನುವ ಗ್ರಾಮದಲ್ಲಿ, ತಮ್ಮ ಮನೆಯ ಹೊರಗೆ ಬೈಕ್‌ ಪಾರ್ಕಿಂಗ್ ವಿಚಾರದಲ್ಲಿ ಆರೋಪಿ ಸನ್ವರಾ ಭೀಲ್ ಹಾಗೂ ಆತನ ಕಿರಿಯ ಸಹೋದರ ಮನೋಜ್ ಭೀಲ್ (30) ನಡುವೆ ಶುಕ್ರವಾರ ರಾತ್ರಿ ವಾಗ್ವಾದ ನಡೆದಿದೆ ಎಂದು ಪೊಲೀಸ್‌ ಅಧಿಕಾರಿ ರಘುವೀರ್‌ ಸಿಂಗ್‌ ಮಾಹಿತಿ ನೀಡಿದ್ದಾರೆ.

ಈ ವೇಳೆ ಮನೋಜ್‌ ಮೇಲೆ ಸನ್ವಾರ ಕೊಡಲಿಯಿಂದ ಹಲ್ಲೆ ಮಾಡಿದ್ದಾನೆ. ಪ್ರಜ್ಞೆ ತಪ್ಪಿ ಬಿದ್ದ ಮನೋಜ್‌ನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ದಾರಿ ಮಧ್ಯೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು ಎಂದು ರಘುವೀರ್‌ ಹೇಳಿದ್ದಾರೆ.

ಘಟನೆ ನಡೆದ ಬಳಿಕ ಆರೋ‍ಪಿ ತಲೆಮರೆಸಿಕೊಂಡಿದ್ದ. ಶನಿವಾರ ಬೆಳಿಗ್ಗೆ ಆತನನ್ನು ಬಂಧಿಸಲಾಯಿತು ಎಂದು ಅವರು ತಿಳಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಕಲಂ 302ರಡಿ (ಕೊಲೆ) ದೂರು ದಾಖಲಿಸಿಕೊಳ್ಳಲಾಗಿದೆ. ಭಾನುವಾರ ಆರೋಪಿಯನ್ನು ನ್ಯಾಯಾಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆ ಹಾಗೂ ದಾಳಿ ಮಾಡಿದ ಆಯುಧ ವಶಪಡಿಸಿಕೊಳ್ಳಲು ಒಂದು ದಿನದ ಕಸ್ಟಡಿಗೆ ನೀಡಲಾಗಿದೆ.

ಮರಣೋತ್ತರ ಪರೀಕ್ಷೆ ಬಳಿಕ ಮನೋಜ್‌ ಮೃತದೇಹವನ್ನು ಶನಿವಾರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT