ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಹಾರಾಷ್ಟ್ರ | 11 ವರ್ಷದ ಅಂಗವಿಕಲ ಬಾಲಕಿಗೆ ಲೈಂಗಿಕ ಕಿರುಕುಳ: ವ್ಯಕ್ತಿ ಬಂಧನ

Published 20 ಆಗಸ್ಟ್ 2024, 11:34 IST
Last Updated 20 ಆಗಸ್ಟ್ 2024, 11:34 IST
ಅಕ್ಷರ ಗಾತ್ರ

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ 11 ವರ್ಷದ ಅಂಗವಿಕಲ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಆರೋಪಿಯನ್ನು 45 ವರ್ಷದ ಥಾಣೆಯ ವಿತಾವಾ ಪ್ರದೇಶದ ನಿವಾಸಿ ಎಂದು ಗುರುತಿಸಲಾಗಿದೆ.

ಜಿಲ್ಲೆಯ ಕಲ್ವಾದ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿಯು ಬಾಲಕಿಯನ್ನು ಆಸ್ಪತ್ರೆಯ ಆವರಣಕ್ಕೆ ಕರೆತಂದು ಕಿರುಕುಳ ನೀಡುತ್ತಿದ್ದ. ಸಾರ್ವಜನಿಕರೊಬ್ಬರು ಈ ಘಟನೆಯನ್ನು ಗಮನಿಸಿ ಆತನಿಗೆ ಎಚ್ಚರಿಕೆ ನೀಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT