ಲಖಿಂಪುರ್ ಖೇರಿ: ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಹತ್ಯೆ ಮಾಡಿದ್ದ ಆರೋಪಿಯನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

‘ನಿಘಾಸನ್ ಪ್ರದೇಶದ ಬಂಹನ್ಪುರ ಗ್ರಾಮದ ಬಳಿ ನಡೆದ ಪೊಲೀಸ್ ಎನ್ಕೌಂಟರ್ನಲ್ಲಿ ಆರೋಪಿ ಲೆಖ್ರಾಮ್ ಕಾಲಿಗೆ ಗುಂಡೇಟು ತಗುಲಿತ್ತು. ಈತನನ್ನು ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿರವಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

‘ಲಖಿಂಪುರ್ ಖೇರಿಯ ಮೂರು ವರ್ಷದ ಬಾಲಕಿ ಬುಧವಾರದಿಂದ ನಾಪತ್ತೆಯಾಗಿದ್ದಳು. ಬಾಲಕಿಯ ಮೃತದೇಹ ಸಮೀಪದ ಗದ್ದೆಯಲ್ಲಿ ಗುರುವಾರ ಪತ್ತೆಯಾಗಿತ್ತು. ಹಳೆಯ ದ್ವೇಷದ ಕಾರಣ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ ಲೆಖ್ರಾಮ್, ಆಕೆಯನ್ನು ಕತ್ತುಹಿಸುಕಿ ಸಾಯಿಸಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ.

ತನ್ನ ಮಗಳನ್ನು ಲೆಖ್ರಾಮ್ ಅಪಹರಿಸಿರಬಹುದು ಎಂದು ಅನುಮಾನ ವ್ಯಕ್ತಪಡಿಸಿ ಮೃತಬಾಲಕಿಯ ತಂದೆ ಪೊಲೀಸರಿಗೆ ದೂರು ನೀಡಿದ್ದರು.

20 ದಿನಗಳ ಅವಧಿಯಲ್ಲಿ ಲಖಿಂಪುರ್ ಖೇರಿ ಜಿಲ್ಲೆಯಲ್ಲಿ ಮೂರು ಅತ್ಯಾಚಾರ ಪ್ರಕರಣಗಳು ನಡೆದಿವೆ.

ಲಖಿಂಪುರ್ ಖೇರಿಯಲ್ಲಿ ಕಳೆದ ವಾರದ ಸ್ಕಾಲರ್ ಶಿಪ್ ಅರ್ಜಿ ತುಂಬಲೆಂದು ಮನೆಯಿಂದ ಹೊರಹೋಗಿದ್ದ 17ರ ದಲಿತ ಯುವತಿ ಶವವಾಗಿ ಪತ್ತೆಯಾಗಿದ್ದಳು. ಆಕೆಯ ಮೇಲೆ ಅತ್ಯಾಚಾರ ಎಸಗಿ, ವಿಕೃತವಾಗಿ ಕೊಲೆ ಮಾಡಿ ಪಾಳುಬಾವಿಯಲ್ಲಿ ಎಸೆಯಲಾಗಿತ್ತು. ಈ ಘಟನೆಗೂ ಮುನ್ನ ಜಿಲ್ಲೆಯಲ್ಲಿ 13 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.