ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮಮಂದಿರ ಸ್ಫೋಟಿಸುವ ಬೆದರಿಕೆ: ವ್ಯಕ್ತಿ ಬಂಧನ

Published 21 ಜನವರಿ 2024, 13:01 IST
Last Updated 21 ಜನವರಿ 2024, 13:01 IST
ಅಕ್ಷರ ಗಾತ್ರ

ಅರರಿಯಾ: ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮ ಮಂದಿರವನ್ನು ಜನವರಿ 22ರಂದು ಸ್ಫೋಟಿಸುವುದಾಗಿ ಪೊಲೀಸರಿಗೆ ಕರೆ ಮಾಡಿ ಬೆದರಿಸಿದ್ದ  ವ್ಯಕ್ತಿಯನ್ನು ಬಿಹಾರದ ಅರರಿಯಾದಲ್ಲಿ ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದರು.

ಇಂತೆಖಾಬ್‌ ಆಲಂ (21) ಬಂಧಿತ ವ್ಯಕ್ತಿ. ಈತ ಜನವರಿ 19ರಂದು 112 ತುರ್ತು ಸಹಾಯ ಸಂಖ್ಯೆಗೆ ಕರೆ ಮಾಡಿ, ‘ನನ್ನ ಹೆಸರು ಛೋಟಾ ಶಕೀಲ್‌. ನಾನು ದಾವೂದ್ ಇಬ್ರಾಹಿಂ ಸಹಚರ. ಜ.22ರಂದು ರಾಮಮಂದಿರವನ್ನು ಸ್ಫೋಟಿಸುತ್ತೇನೆ’ ಎಂದು ಹೇಳಿದ್ದ ಎಂದು ಪೊಲೀಸ್‌ ವರಿಷ್ಠಾಧಿಕಾರಿ ಅಶೋಕ್ ಕುಮಾರ್‌ ಸಿಂಗ್‌ ತಿಳಿಸಿದ್ದಾರೆ.

‘ಈತನಿಗೆ ಅಪರಾಧ ಹಿನ್ನೆಲೆ ಇಲ್ಲ. ಮಾನಸಿಕ ಅಸ್ವಸ್ಥನಂತೆ ಕಾಣುತ್ತಾನೆ. ಆದರೆ ಸೂಕ್ಷ್ಮ ವಿಷಯವಾಗಿರುವ ಕಾರಣ ಪ್ರಕರಣ ದಾಖಲಿಸಿಕೊಂಡು, ಮೊಬೈಲ್‌ ವಶಕ್ಕೆ ಪಡೆಯಲಾಗಿದೆ’ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT